ಮೈಸೂರು ನಗರ

ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುತ್ತೆ ಎಂದು ಬಿಜೆಪಿಯವರು ಹೇಳುತ್ತಾನೆ ಇದ್ದಾರೆ. ಆದರೆ ಬಿಜೆಪಿಯಲ್ಲೇ ಕಚ್ಚಾಟ ಹೆಚ್ಚಾಗಿದೆ. ಈಗ ಬಿಜೆಪಿ ಪಕ್ಷ ಹರಿದು ಊರು ಬಾಗಿಲು ಆಗಿದೆ. ನಮ್ಮ ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ. ಸಿಎಂ ಬದಲಾವಣೆ ಆಗಲ್ಲ ಎಂದು ಖಡಕ್‌ ಆಗಿ ಸಂದೇಶ ನೀಡಿದೆ. ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್ ನಿಂತಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಯಾರೋ ಕಿಡಿಗೇಡಿ ವಿವಾದಿತ ಪೋಸ್ಟ್‌ ಹಾಕಿದ್ದ. ಅದಕ್ಕೆ ಕೆಲವರು ಕಾನೂನು ಕೈಗೆತ್ತಿಕೊಂಡರು. ಸರ್ಕಾರ ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಂಡಿದೆ. ಇದನ್ನು ರಾಜಕೀಯ ಮಾಡಲು ಬಿಜೆಪಿ ಹೊರಟಿತ್ತು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇನ್ನು ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕ್ಲೀನ್‌ಚಿಟ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಸತ್ಯಕ್ಕೆ ಸಿಕ್ಕ ಜಯ ಎಂದರು.

ಸೈಟ್‌ ವಿಚಾರವಾಗಿ ನನ್ನ ತಂದೆ ಯಾವುದೇ ಪತ್ರ ಬರೆದಿಲ್ಲ. ನನ್ನ ತಾಯಿ ಪತ್ರ ಬರೆದಿದ್ದಾರೆ. ನನ್ನ ಜಮೀನು ಬದಲಿ ಸೈಟ್‌ ನೀಡಿ ಎಂದು ಬರೆದಿದ್ದಾರೆ. ಸೈಟ್‌ ಪಡೆಯುವಲ್ಲಿ ಯಾವುದೇ ಪ್ರಭಾವ ಬಳಸಿಲ್ಲ. ಎಲ್ಲರಿಗೂ ಸೈಟ್‌ ಕೊಟ್ಟಂತೆ ನಮಗೂ ಕೊಟ್ಟಿದ್ದಾರೆ ಎಂದು ಹೇಳಿದರು.

ಇನ್ನು ಮುಡಾ ಹಗರಣದಲ್ಲಿ ನನ್ನ ಹೆಸರನ್ನು ಕೂಡ ತಳುಕು ಹಾಕಲು ಯತ್ನ ನಡೆಯಿತು. ನಾನು ಮುಡಾ ಸದಸ್ಯ ಆಗಿದ್ದೆ. ಎಲ್ಲಿಯೂ ಕೂಡ ನಾನು ಏನು ಹೇಳಿಲ್ಲ. ಆರ್‌ಟಿಐ ಕಾರ್ಯಕರ್ತರನ್ನು ಇಟ್ಟುಕೊಂಡು ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದರು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

15 mins ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

38 mins ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

46 mins ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

55 mins ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

1 hour ago