ಮೈಸೂರು ನಗರ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ: ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಮೈಸೂರು: ಕಾಂಗ್ರೆಸ್‌ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಎಲ್ಲಾ ಗ್ಯಾರಂಟಿಗಳು ಫೇಲ್ಯೂರ್‌ ಆಗಿವೆ. ಯಾವ ಕಡೆಯಿಂದ ತೆರಿಗೆ ಸಂಗ್ರಹ ಆಗುತ್ತಿದೆ, ಆ ಹಣವನ್ನು ಏನು ಮಾಡುತ್ತಿದ್ದೀರಿ ಎಂಬುದೇ ಗೊತ್ತಾಗುತ್ತಿಲ್ಲ. ಕೇಂದ್ರ ಸರ್ಕಾರ ಕೊಡುವ ಅನುದಾನದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಪರಸ್ಪರ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಯಾರು ಸಿಎಂ ಆಗಬೇಕೆಂದು ಮೇಲಾಟ ನಡೆಯುತ್ತಿದೆ. ಸಿಎಂ ಬದಲಾವಣೆ ವಿಚಾರ ಅವರ ಪಕ್ಷದ ಆಂತರಿಕ ವಿಚಾರ. 135 ಶಾಸಕರನ್ನು ಕರ್ನಾಟಕ ರಾಜ್ಯದ ಜನರ ನಂಬಿ ಗೆಲ್ಲಿಸಿದ್ದಾರೆ. ಅವರಿಗೆ ನ್ಯಾಯ ಕೊಡಿಸಿ ಎಂದು ಸಲಹೆ ನೀಡಿದರು.

ಇನ್ನು ದಲಿತರೊಬ್ಬರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಿ ಎಂಬ ಸಿಎಂ ಸಿದ್ದರಾಮಯ್ಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ವಿಚಾರವನ್ನು ಡೈವರ್ಟ್‌ ಮಾಡಲು ಏನೇನೋ ಮಾತನಾಡುತ್ತಿದ್ದಾರೆ. ಈ ಸರ್ಕಾರದಲ್ಲಿ ಅನೇಕರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

9 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

9 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

9 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

11 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

13 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

18 hours ago