ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಭಿಪ್ರಾಯ ಪಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಹಾದುಹೋಗುವ ರಸ್ತೆಗೆ ರಾತ್ರಿ ಸಂಚಾರಕ್ಕೆ ಅವಕಾಶ ವಿಚಾರ ಭಾರೀ ಸದ್ದು ಮಾಡುತ್ತಿದೆ.
ಈ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪ್ರಾಣಿಪ್ರಿಯರು ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು. ಇದರಿಂದ ವನ್ಯಜೀವಿಗಳಿಗೆ ಅಪಾಯ ಎದುರಾಗುತ್ತಿದೆ. ಜೊತೆಗೆ ಪ್ರಾಣಿ ಬೇಟೆ ಸೇರಿದಂತೆ ಅಕ್ರಮ ಚಟುವಟಿಕೆಗಳು ಜಾಸ್ತಿಯಾಗುತ್ತವೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅನುಮತಿ ಕೊಡಬಾರದು. ರಸ್ತೆಯಲ್ಲಿ ರಾತ್ರಿ ಸಂಚಾರದ ಅವಶ್ಯಕತೆ ಇಲ್ಲ. ಪ್ರಾಣಿಗಳ ದೃಷ್ಟಿಯಿಂದ ರಾತ್ರಿ ಸಂಚಾರ ಬೇಡ. ಸಂಚಾರಕ್ಕೆ ಈಗ ಇರುವಷ್ಟು ಅವಧಿ ಸಾಕು ಎಂದು ಹೇಳಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…