Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸಿಎಂ ವಿರುದ್ಧ ಎಫ್‌ಐಆರ್‌ ಆದ ತಕ್ಷಣ ರಾಜೀನಾಮೆ ಕೊಡಬೇಕಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಗ್ಗಿಲ್ಲ. ಎಫ್‌ಐಆರ್‌ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್‌ಐಆರ್‌ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ. ಜೈಲಿಗೆ ಹೋದ ತಕ್ಷಣ ರಾಜೀನಾಮೆ ನೀಡು ಎಂದು ಕೋರ್ಟ್‌ ಹೇಳಿದ್ಯಾ? ಎಂದು ಪ್ರಶ್ನೆ ಮಾಡಿದರು.

ದೇಶದಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಎಫ್‌ಐಆರ್‌ ಆಗಿದೆ. ಅವರೆಲ್ಲಾ ರಾಜೀನಾಮೆ ಕೊಟ್ಟು ಮನೆಯಲ್ಲಿ ಕೂತಿದ್ದಾರಾ ಎಂದು ಪ್ರಶ್ನಿಸಿದರು.

ಇನ್ನು ಸಿಎಂ ಸ್ಥಾನ ಬದಲಾವಣೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಬಹುಮತ ಪಡೆದು ಸಿಎಂ ಆಗಿದ್ದಾರೆ. ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

 

 

 

Tags: