ಮೈಸೂರು : ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆ ಹಿನ್ನೆಲೆ ಯಾವುದೇ ರೀತಿಯ ವಿಶೇಷವಾದ ಪಾಸ್ ಇರುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೆಶ್ವರಿಗೆ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತದೆ. ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ.
ಹೀಗಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ್ದು, ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇರುವುದಿಲ್ಲ. ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಎಲ್ಲಾ ಖಾಸಗಿ ವಾಹನಗಳಿಗೆ ನಿರ್ಬಂಧಿಸಲಾಗಿದ್ದು, ಉಚಿತ ಬಸ್ ಮೂಲಕವೇ ಪ್ರತಿಯೊಬ್ಬರು ಚಾಮುಂಡಿಬೆಟ್ಟಕ್ಕೆ ತೆರಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…