post office
ಮೈಸೂರು: ಐಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ಅಂಚೆ ಕಚೇರಿಗಳಲ್ಲಿ ಜೂನ್ 2 ಮತ್ತು 3 ರಂದು ಯಾವುದೇ ರೀತಿಯ ವಹಿವಾಟು ಇರುವುದಿಲ್ಲ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ.ಹರೀಶ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಬನ್ನಿಮಂಟಪ, ಚಾಮುಂಡಿ ಎಕ್ಸ್ ಟೆನ್ಷನ್, ಜಿ.ಎಸ್ ಆಶ್ರಮ, ಹೆಬ್ಬಾಳ್ ಲೇ ಔಟ್, ಜಯಲಕ್ಷ್ಮಿಪುರಂ, ಕೃಷ್ಣಮೂರ್ತಿಪುರಂ, ಮಾನಸಗಂಗೋತ್ರಿ, ಮಂಡಿ ಮೊಹಲ್ಲಾ, ಮೇಟಗಳ್ಳಿ, ಮೈಸೂರು ಫೋರ್ಟ್, ಮೈಸೂರು ಯುನಿವರ್ಸಿಟಿ, ನರಸಿಂಹರಾಜ ಮೊಹಲ್ಲಾ, ನೋಟ್ ಮುದ್ರಣ ನಗರ, ಪಿಟಿಸಿ ಕ್ಯಾಂಪಸ್, ಶಕ್ತಿ ನಗರ, ಶಿವರಾತ್ರೀಶ್ವನಗರ, ಸಿದ್ದಾರ್ಥನಗರ, ವಿಜಯನಗರ ಎರಡು ಮತ್ತು ಮೂರನೇ ಹಂತ, ಯಾದವಗಿರಿ, ಬಿಎನ್‌ಪಿಎಲ್ ಮತ್ತು ಬಿಪಿಸಿ ಅಂಚೆ ಕಚೇರಿಗಳು ಮೇಲ್ಕಂಡ ಎರಡು ದಿನಗಳ ಕಾಲ ವಹಿವಾಟು ನಡೆಸುವುದಿಲ್ಲ ಎಂದು ಹೇಳಿದ್ದಾರೆ.
ಸರಸ್ವತಿಪುರಂ ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…