Mysore
22
overcast clouds

Social Media

ಸೋಮವಾರ, 18 ಮೇ 2026
Light
Dark

ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು: ಪ್ರಭಾರ ನಿರೀಕ್ಷಕರಾಗಿ ಸಿಸಿಬಿಯ ಶಬ್ಬೀರ್ ಹುಸೇನ್ ನೇಮಕ

ಮೈಸೂರು: ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತುಪಡಿಸಲಾಗಿದೆ.

ಅಡಳಿತಾತ್ಮಕ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದ್ದು, ನಗರಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ. ಸದರಿ ಸ್ಥಳಕ್ಕೆ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ನಿರೀಕ್ಷಕರಾದ ಶಬ್ಬೀರ್ ಹುಸೇನ್ ರವರನ್ನು ಪ್ರಭಾರ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.

Tags:
error: Content is protected !!