Mysore
24
clear sky

Social Media

ಶನಿವಾರ, 24 ಜನವರಿ 2026
Light
Dark

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಗರ ಪಾಲಿಕೆಯಲ್ಲಿ ಸಾರ್ವಜನಿಕ ನಿಧಿಯನ್ನೇ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಯನ್ನು ಅಮಾನತು ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರವು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದೇ ವಿಳಂಬ ಧೋರಣೆ ತೋರುತ್ತಿರುವುದು ಎಲ್ಲದಕ್ಕೂ ಕಾರಣವಾಗಿದೆ.

ಸ್ಥಳೀಯ ಪ್ರಜಾಪ್ರಭುತ್ವ ಹಾದಿ ತಪ್ಪಿದಾಗ, ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಒಟ್ಟಾರೆ ಎಲ್ಲಾ ಪ್ರಕರಣಗಳಿಗೂ ಕಾಂಗ್ರೆಸ್‌ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ ಎಂದು ಆರೋಪಿಸಿದರು.

Tags:
error: Content is protected !!