ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೇಲ್ ಸೇತುವೆ, ಸುರಂಗ ಮಾರ್ಗ ನಿರ್ಮಾಣ ಹಾಗೂ ಗ್ರೇಟರ್ ಮೈಸೂರು ಯೋಜನೆ ಸೂಕ್ತವಲ್ಲ ಎಂದು ಮೈಸೂರು ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ.
ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರಿಂದ ಮೈಸೂರು ರಾಜ್ಯದ ಅಭಿವೃದ್ಧಿ ಪ್ರಾರಂಭವಾಗಿ ಬಹಳಷ್ಟು ದಿವಾನರು, ದಕ್ಷ ಅಧಿಕಾರಿಗಳು ಅದಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಪಾರಂಪರಿಕ ನಗರಕ್ಕೆ ಗ್ರೇಟರ್ ಮೈಸೂರು ಎಂದು ಹೆಸರು ಬದಲಿಸ ಹೊರಟಿರುವುದು ಸರಿಯಲ್ಲ ಎಂದು ವೇದಿಕೆಯ ಅಧ್ಯಕ್ಷ ಮೈ.ಕಾ.ಪ್ರೇಮ್‌ಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದನ್ನು ಓದಿ: ಗ್ರೇಟರ್ ಮೈಸೂರು ರಚನೆಗೆ ಮರುಜೀವ
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೂ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ ಉಲ್ಲೇಖಿಸಿರುವ ವಿನೋಬಾ ರಸ್ತೆ, ಜೆಎಲ್‌ಬಿ ರಸ್ತೆಗಳಲ್ಲಿ ಪಾರಂಪರಿಕ ಕಟ್ಟಡಗಳಿದ್ದು, ಭೂಗತ ನೀರಿನ ಪೈಪ್‌ಲೈನ್ ಸಹ ಹಾದು ಹೋಗಿದೆ. ಹೀಗಾಗಿ ಇಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ತಿಳಿಸಿದರು.
ನಗರದಲ್ಲಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಕಸದ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಪಾದಚಾರಿ ಮಾರ್ಗಗಳ ಒತ್ತುವರಿಯಾಗಿದೆ. ರಸ್ತೆಗಳು ಹದಗೆಟ್ಟಿವೆ. ಹೀಗಾಗಿ ಇಂತಹ ಸಮಸ್ಯೆಗಳನ್ನು ಬಗೆಹರಿಸುವತ್ತ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದು ಆಗ್ರಹಿಸಿದರು.
ವೇದಿಕೆಯ ಮುಖಂಡರಾದ ಕುಮಾರಗೌಡ, ಗುರುರಾಜ್, ಸಂಜಯ್, ಪ್ರಮೋದ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…