ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೇಲ್ ಸೇತುವೆ, ಸುರಂಗ ಮಾರ್ಗ ನಿರ್ಮಾಣ ಹಾಗೂ ಗ್ರೇಟರ್ ಮೈಸೂರು ಯೋಜನೆ ಸೂಕ್ತವಲ್ಲ ಎಂದು ಮೈಸೂರು ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ.
ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರಿಂದ ಮೈಸೂರು ರಾಜ್ಯದ ಅಭಿವೃದ್ಧಿ ಪ್ರಾರಂಭವಾಗಿ ಬಹಳಷ್ಟು ದಿವಾನರು, ದಕ್ಷ ಅಧಿಕಾರಿಗಳು ಅದಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಪಾರಂಪರಿಕ ನಗರಕ್ಕೆ ಗ್ರೇಟರ್ ಮೈಸೂರು ಎಂದು ಹೆಸರು ಬದಲಿಸ ಹೊರಟಿರುವುದು ಸರಿಯಲ್ಲ ಎಂದು ವೇದಿಕೆಯ ಅಧ್ಯಕ್ಷ ಮೈ.ಕಾ.ಪ್ರೇಮ್‌ಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದನ್ನು ಓದಿ: ಗ್ರೇಟರ್ ಮೈಸೂರು ರಚನೆಗೆ ಮರುಜೀವ
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೂ ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ ಉಲ್ಲೇಖಿಸಿರುವ ವಿನೋಬಾ ರಸ್ತೆ, ಜೆಎಲ್‌ಬಿ ರಸ್ತೆಗಳಲ್ಲಿ ಪಾರಂಪರಿಕ ಕಟ್ಟಡಗಳಿದ್ದು, ಭೂಗತ ನೀರಿನ ಪೈಪ್‌ಲೈನ್ ಸಹ ಹಾದು ಹೋಗಿದೆ. ಹೀಗಾಗಿ ಇಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ತಿಳಿಸಿದರು.
ನಗರದಲ್ಲಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಕಸದ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಪಾದಚಾರಿ ಮಾರ್ಗಗಳ ಒತ್ತುವರಿಯಾಗಿದೆ. ರಸ್ತೆಗಳು ಹದಗೆಟ್ಟಿವೆ. ಹೀಗಾಗಿ ಇಂತಹ ಸಮಸ್ಯೆಗಳನ್ನು ಬಗೆಹರಿಸುವತ್ತ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದು ಆಗ್ರಹಿಸಿದರು.
ವೇದಿಕೆಯ ಮುಖಂಡರಾದ ಕುಮಾರಗೌಡ, ಗುರುರಾಜ್, ಸಂಜಯ್, ಪ್ರಮೋದ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…