ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಕ್ಟೋಬರ್.3ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ, ವಸ್ತುಪ್ರದರ್ಶನ, ಕ್ರೀಡಾ ಉತ್ಸವ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಮುಖ್ಯವಾಗಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…