ಮೈಸೂರು ನಗರ

ಮೈಸೂರು ದಸರಾ ಉದ್ಘಾಟಿಸಲು ನಾಳೆ ಬಾನು ಮುಷ್ತಾಕ್‌ಗೆ ಅಧಿಕೃತ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ನಾಳೆ ಸಂಜೆ 4 ಗಂಟೆಗೆ ಬಾನು ಮುಷ್ತಾಕ್‌ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.

ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬಾನು ಮುಷ್ತಾಕ್‌ ಅವರು ಮಾಡಲಿದ್ದಾರೆ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಅಂತೆಯೇ ರಾಜ್ಯ ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತ ನಾಳೆ ಸಂಜೆ ಬಾನು ಮುಷ್ತಾಕ್‌ ಅವರ ಮನೆಗೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಲಿದೆ.

ಬಾನು ಮುಷ್ತಾಕ್‌ ಕರ್ನಾಟಕದ ಕನ್ನಡ ಭಾಷೆಯ ಬರಹಗಾರ್ತಿ, ಕಾರ್ಯಕರ್ತೆ ಹಾಗೂ ವಕೀಲೆ. ದೀಪಾ ಭಸ್ತಿ ಅನುವಾದಿಸಿದ ಅವರ ಸಣ್ಣ ಕಥೆಗಳ ಆಯ್ದ ಭಾಗವಾದ ಹಾರ್ಟ್‌ ಲ್ಯಾಂಪ್‌ಗೆ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಈ ಪುಸ್ತಕವು 2025ರಲ್ಲಿ ಅಂತರರಾಷ್ಟ್ರೀಯ ಬೂಕರ್‌ ಪ್ರಶಸ್ತಿಯನ್ನು ಗೆದ್ದಿದೆ.

ಇನ್ನು ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ದಸರಾ ನಾಡಹಬ್ಬ. ಹಾಗಾಗಿ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ದಸರಾ ನಾಡಹಬ್ಬವಾಗಿರುವುದರಿಂದ ಇಂಥವರೇ ಉದ್ಘಾಟನೆ ಮಾಡಬೇಕು ಅಂತೆನೋ ಇಲ್ಲ. ಎಲ್ಲರೂ ಸೇರಿ ದಸರಾವನ್ನು ಆಚರಣೆ ಮಾಡಬೇಕು. ನಾಡಹಬ್ಬ ಎಲ್ಲರಿಗೂ ಸೇರಿದ್ದು. ಹಾಗಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago