ಮೈಸೂರು: ಸ್ವದೇಶ್ ದರ್ಶನ್ ಯೋಜನೆಯಡಿ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 70 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲ ಹಂತದಲ್ಲಿ ಟಾಂಗಾ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್‌ಪಿರಿನ್ಸ್ ವಲಯಕ್ಕೆ 21.17 ಕೋಟಿ ರೂ ಅನುದಾನಕ್ಕೆ ಡಿಪಿಆರ್ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಎರಡನೇ ಹಂತದಲ್ಲಿ ಮೈಸೂರಿನ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು ಹಾಗೂ ಮೈಸೂರು ಗತವೈಭವ ಹಾಗೂ ಪರಂಪರೆ ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸೂಚನೆ ನೀಡಿದ್ದಾರೆ.