ಮೈಸೂರು ನಗರ

ಎಂಪಿ ಟಿಕೆಟ್‌ ಕಳೆದುಕೊಂಡು ಒಂದು ವರ್ಷವಾಯಿತು: ಮಾಜಿ ಸಂಸದ ಪ್ರತಾಪ್‌ ಸಿಂಹ ಟ್ವೀಟ್‌

ಮೈಸೂರು: ಎಂಪಿ ಟಿಕೆಟ್ ಕಳೆದುಕೊಂಡು ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ ಹಾಗೂ ಜನರ ಆಶೀರ್ವಾದ ಇವತ್ತಿಗೂ ಹಾಗೆಯೇ ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು ಎಂಪಿ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ ಇವತ್ತಿಗೂ ಹಾಗೇ ಇದೆ ಮತ್ತು ನೀವು ಕೊಟ್ಟಿರುವ ಈ ಶಕ್ತಿಯಿಂದಲೇ ಇವತ್ತಿಗೂ ಸೈದ್ಧಾಂತಿಕ ಕೆಲಸ ಮತ್ತು ಹೋರಾಟವನ್ನು 8 ಎಫ್‌ಐಆರ್ ಹಾಕಿಸಿಕೊಂಡರೂ ಮುಂದುವರಿಸುತ್ತಿದ್ದೇನೆ. ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ಹೀಗೇ ನಿರಂತರವಾಗಿರಲಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗುತ್ತದೆ ಎಂದು ತೀವ್ರ ವಿಶ್ವಾಸದಲ್ಲಿದ್ದ ಪ್ರತಾಪ್‌ ಸಿಂಹ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್‌ ಮಿಸ್‌ ಆಗಿತ್ತು. ಕೊನೆಗೆ ಬಿಜೆಪಿ ಹೈಕಮಾಂಡ್‌ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ನೀಡಿತ್ತು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಲಕ್ಷ್ಮಣ್‌ ವಿರುದ್ಧ 1.30 ಲಕ್ಷ ಮತಗಳ ಅಂತರದಿಂದ ಯದುವೀರ್‌ ಒಡೆಯರ್‌ ಜಯಗಳಿಸಿದರು. ಪರಿಣಾಮ ಸಿಎಂ ಸಿದ್ದರಾಮಯ್ಯಗೆ ತವರು ಜಿಲ್ಲೆಯಲ್ಲೇ ಭಾರೀ ಮುಖಭಂಗವಾಗಿತ್ತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

1 hour ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

1 hour ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago