ಮೈಸೂರು ನಗರ

ಪರಿಶ್ರಮದಿಂದ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ : ಹೆಚ್ಚುವರಿ ಆಯುಕ್ತೆ ವೀಣಾ

ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ ಅಗತ್ಯ ಎಂದು ಮೈಸೂರು ಮಹಾ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎಂ.ವೀಣಾ ಹೇಳಿದರು.

ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಕ್ತಭಂಡಾರ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ನಿರಂತರ ಅಭ್ಯಾಸ, ಸತತ ಕಠಿಣ ಪರಿಶ್ರಮದಿಂದ ಮಾತ್ರ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ. ಓದುವಾಗ ಎಚ್ಚರಿಕೆಯಿಂದ, ವಿವೇಚನೆಯಿಂದ ಓದುವುದು ಉತ್ತಮ. ನಿತ್ಯ ದಿನಪತ್ರಿಕೆ ಓದಲು ಒತ್ತು ನೀಡಿ, ಸಾಮಾನ್ಯ ಜ್ಞಾನ ಅರಿವಿರಲಿ ಎಂದು ಕಿವಿಮಾತು ಹೇಳಿದರು.

ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಪರೀಕ್ಷೆಗಳಿಗೆ ಹೆಚ್ಚು ತಯಾರಿ ಮುಖ್ಯ. ಓದುವಾಗ ಯಾವಾಗಲೂ ವ್ಯಕ್ತಿಯೊಬ್ಬರನ್ನು ಮಾದರಿಯನ್ನಾಗಿಟ್ಟುಕೊಂಡಾಗ ಆಸಕ್ತಿ ಹೆಚ್ಚಾಗುತ್ತದೆ. ನಾವೆಲ್ಲಾ ಓದುವಾಗ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಹೆಚ್ಚಾಗಿ ಅನುಕರಿಸುತ್ತಿದ್ದೆವು ಎಂದು ತಮ್ಮ ಅನುಭವ ಹಂಚಿಕೊಂಡರು.

ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಡಬೇಕು. ಗೆಲುವು-ಸೋಲು ಸಾಮಾನ್ಯ. ಸೋತರೆ ಕುಗ್ಗದೇ ನಿರಂತರ ಪ್ರಯತ್ನ ಪಡಬೇಕು, ಆಗ ಗೆಲುವು ನಿಶ್ವಿತ ಎಂದು ಪ್ರತಿಪಾದಿಸಿದರು.

ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ ಎಂ.ಬಾಲಸುಬ್ರಹ್ಮಣ್ಯ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ದೂರದ ಪಯಣದಂತೆ, ಪರಿಶ್ರಮ ಮುಖ್ಯ. ನಿಮಗೆ ಅನುಕೂಲವಾಗುವಂತೆ ಅಭ್ಯಾಸ ಮತ್ತು ಸಂವಹನ ಕೌಶಲ್ಯ ಅಳವಡಿಸಿಕೊಳ್ಳಿ. ಎಷ್ಟು ಮತ್ತು ಹೇಗೆ ಓದುತ್ತೀರಾ ಎನ್ನುವುದು ಮುಖ್ಯ ಎಂದು ತಿಳಿಸಿದರು.

ಕರಾಮುವಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ, ಧೈರ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು. ಸಮಾಜದಲ್ಲಿ ನ್ಯಾಯಯುತ ಬದುಕು ಕಟ್ಟಿಕೊಳ್ಳಬೇಕು. ಗುರಿ ಇಟ್ಟುಕೊಂಡು ತಯಾರಿ ನಡೆಸಬೇಕು. ಸಾಧನೆಗೆ ಸತತ ಪ್ರಯತ್ನವಿರಬೇಕು. ಅರಿವೇ ಗುರು ಎನ್ನುವ ಹಾಗೆ ನಿಮ್ಮನ್ನು ನೀವು ನಂಬಿ ಎಂದು ಸಲಹೆ ನೀಡಿದರು.

ಕರಾಮುವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಶೈಕ್ಷಣಿಕ ಡೀನ್ ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರು, ಗಣೇಶ್ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

35 mins ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

38 mins ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

41 mins ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

43 mins ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

45 mins ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

51 mins ago