ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಕೇಶವ್ ಮೂರ್ತಿ ಅವರು, ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಕರಾಗೋದು ಬೇಡ ಎಂದು ಮನವಿ ಮಾಡಿದ್ದೆವು. ಹೀಗಿದ್ದರೂ ಬಂಡತನದ ಸರ್ಕಾರ ಅವರಿಗೆ ಆಹ್ವಾನ ನೀಡಿದೆ. ನಮ್ಮ ಸಂಸ್ಕೃತಿ ಒಪ್ಪಿ ದಸರಾ ಉದ್ಘಾಟನೆ ಮಾಡಿದ್ರೆ ನಮ್ಮ ಅಭ್ಯಂತರ ಇಲ್ಲ. ಈಗಂತ ದಸರಾ ಉದ್ಘಾಟನೆಗೆ ನಾವು ಅಡ್ಡಿಪಡಿಸಲ್ಲ.
ಇದನ್ನು ಓದಿ: ಭಾನು ಮುಷ್ತಾಕ್ ಹಿಂದೂ ವಿರೋಧಿ : ನಿಖಿಲ್ ಕುಮಾರಸ್ವಾಮಿ
ಹಿಂದೂಗಳನ್ನ ಜಾಗೃತಿ ಮಾಡುವ ಕೆಲಸ ಮಾಡುತ್ತೇವೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.8ರಂದು ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಕುರುಬಾರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತೇವೆ. ಬಳಿಕ ಚಾಮುಂಡಿ ಬೆಟ್ಟದಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತದೆ. ಹಿಂದೂಗಳು ಹಾಗೂ ಹಿಂದೂಗಳ ದೇವಾಲಯಗಳನ್ನು ಟಾರ್ಗೆಟ್ ಮಾಡಲಾಗ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ನಡೆಯುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…