ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿ ತಾಯಿ ದರ್ಶನ ಪಡೆದರು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಚಾಮುಂಡಿಬೆಟ್ಟ ಹಿಂದುಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿಂದು ವಿಪಕ್ಷ ನಾಯಕ ಆರ್.ಅಶೋಕ್ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು.
ಆರ್.ಅಶೋಕ್‌ಗೆ ಶಾಸಕ ಶ್ರೀವತ್ಸ, ಎಲ್.ನಾಗೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದರು.





