ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯದಲಲಿ ಇದೇ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದೇನೆ.
ಇದನ್ನು ಓದಿ: ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಮೈಸೂರು ಕಸಬಾ ಹೋಬಳಿಯ ಸರ್ವೆ ನಂ.1ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿಯಲ್ಲಿ ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದಕ್ಕೆ ನನ್ನ ವಿರೋಧವಿಲ್ಲ. ಬಹಿರಂಗ ಹಾಗೂ ಅಂತರಂಗ ಜಗಳ ವಿಚಾರವೂ ಇಲ್ಲಿ ಇಲ್ಲ. ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ ಅದಕ್ಕೆ ನನ್ನ ವಿರೋಧ ಇಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಅದರ ಬದಲು ಈ ನಿರ್ದಿಷ್ಟ ಖಾಸಗಿ ವ್ಯಕ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ.
ಇದು ಭಾರತ ಸರ್ಕಾರ ಮತ್ತು ಅಂದಿನ ರಾಜ್ಯ ಸರ್ಕಾರದ ನಡುವೆ ರಾಜ್ಯಗಳ ವಿಲೀನದ ಸಮಯದಲ್ಲಿ, ನಂತರದ ಒಪ್ಪಂದದ ದಿನಾಂಕವಾದ ಜನವರಿ.23, 1950 ರಂದು ಇತ್ಯರ್ಥವಾಗಿದೆ. ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿದ್ದು, ಆ ಕೆಲಸವನ್ನು ನಾನು ಮಾಡಿದ್ದೇನೆ.
ನಾನು ಸಲ್ಲಿಸಿದ ಅರ್ಜಿಯಲ್ಲಿ ನನ್ನ ನಿಲುವನ್ನು ದೃಢೀಕರಿಸಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಲಾಗಿದೆ. ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…