ಮೈಸೂರು ನಗರ

ಕರ್ನಾಟಕದಲ್ಲಿ ಮಾಲೀಕರಾಗುತ್ತಿರುವ ಅನ್ಯರಾಜ್ಯದವರು: ಡಾ.ಸಿ.ಎನ್‌ ವೆಂಕಟರಾಜು ವಿಷಾದ

ಮೈಸೂರು: ನಮ್ಮ ಕರ್ನಾಟಕದಲ್ಲಿ ಅನ್ಯರಾಜ್ಯದ ಮಾರ್ವಾಡಿಗಳೇ ಮಾಲೀಕರಾಗಿ ನೆಲೆಗೊಳ್ಳುತ್ತಿದ್ದಾರೆ. ನಮ್ಮವರು ಕೂಲಿಗಳಾಗುತ್ತಿದ್ದಾರೆ ಎಂದು ಮೈಸೂರು ವಲಯದ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾಧೀನಾಧಿಕಾರಿ ಡಾ.ಎನ್.ಸಿ.ವೆಂಕಟರಾಜು  ವಿಷಾದ ವ್ಯಕ್ತಪಡಿಸಿದರು.

ಶುಕ್ರವಾರ  ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಬಿ.ಎಂ.ಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ ಸುವರ್ಣ ಕರ್ನಾಟಕ ಸವಿನೆನಪಿನಲ್ಲಿ ‘ ಕನ್ನಡ- ಕರ್ನಾಟಕ- ಕನ್ನಡಿಗ’ ಎಂಬ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದದಲ್ಲಿ ಅವರು ಮಾತನಾಡಿದರು.

ಮಹಾರಾಷ್ಟ್ರದಲ್ಲಿ‌ ಪ್ರಸಿದ್ದವಾದ ಕರ್ನಾಟಕ ಎಂಬ ಸ್ಥಳ ಇದೆ. ಊಟಿ, ಕಾಸರಗೋಡು ನಮ್ಮವೇ. ಜೊತೆಗೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಸಂಬಂಧಿತ ಶಾಸನಗಳು ಬಗೆದಷ್ಟು ದೊರಕುತ್ತಿವೆ.  ಮಹಾಜನ್ ವರದಿಯಲ್ಲಿ 264 ಗ್ರಾಮಗಳು ಕರ್ನಾಟಕ ರಾಜ್ಯಕ್ಕೆ ಸೇರಬೇಕೆಂದು ದಾಖಲಾಗಿದೆ. ಆದರೆ ಇನ್ನೂ ಗಡಿ ವಿವಾದ ನಿಂತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಅನ್ಯ ರಾಜ್ಯದ ಗುಜರಾತಿಗಳು, ಮಾರ್ವಾಡಿಗಳು, ಬಿಹಾರಿಗಳು ನಮ್ಮ ರಾಜ್ಯದಲ್ಲಿ ನೆಲೆಗೊಳ್ಳುತ್ತಿದ್ದೂ, ನಾವು ಅವರ ಭಾಷೆಗಳನ್ನು ಕಲಿತು ನಾವು ಅವರ ಜೊತೆ ವ್ಯವಹಾರ ನಡೆಸುವ ದುಸ್ಥಿತಿ ಬಂದಿದೆ. ಇನ್ನು ನಮ್ಮ ನೆಲೆ, ಭಾಷೆ ಎಲ್ಲಿ ಉಳಿಯಿತು?ಅನ್ಯ ರಾಜ್ಯದವರು ನಮ್ಮಲ್ಲಿ‌ ಬಂದು ಉದ್ದಿಮೆದಾರರಾಗುತ್ತಿದ್ದಾರೆ. ಕನ್ನಡಿಗರು ಹೆಚ್ಚೆಚ್ಚು ಉದ್ದಿಮೆದಾರರಾಗುವ ಕಡೆಗೆ ಮನಸ್ಸು ಮಾಡಬೇಕು. ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಕನಿಷ್ಠ ಶೇಕಡವಾರು ಬಡ್ಡಿಯಲ್ಲಿ ಹೆಚ್ಚು ಹಣವನ್ನು ಸಾಲವಾಗಿ ಉದ್ದಿಮೆ ಸ್ಥಾಪಿಸಲು ಅವಕಾಶ ಮಾಡಿಕೊಡುತ್ತಿದ್ದೆ. ಯಾರು ಮುಂದೆ ಬರುತ್ತಿಲ್ಲ. ಇಂತಹ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು‌.

ವೇದಿಕೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಎನ್.ಕೆ.ಲೋಲಾಕ್ಷಿ  ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕಿ ಎಸ್.ಡಿ.ಶಶಿಕಲಾ, ಚಿಂತಕ ಸಿ.ನಾಗಣ್ಣ, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಕೆ.ಸಿ.ಶಿವಾರೆಡ್ಡಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

46 mins ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

48 mins ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

52 mins ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

1 hour ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

2 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago