mysore university
ಮೈಸೂರು : ಔಟ್‌ಲುಕ್ ಐಕೇರ್ ರ‍್ಯಾಂಕಿಂಗ್ಸ್-2025ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು 8ನೇ ಸ್ಥಾನ ಪಡೆದಿದೆ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದ್ದಾರೆ.
ಔಟ್‌ಲುಕ್ ನಿಯತ ಕಾಲಿಕೆಯು ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆ, ಉದ್ದಿಮೆ ಸಹಯೋಗ ಮತ್ತು ಉದ್ಯೋಗಾವಕಾಶ, ಮೂಲಭೂತ ಸೌಕರ್ಯ ಮತ್ತು ಸವಲತ್ತು, ಆಡಳಿತ ಮತ್ತು ವಿಸ್ತರಣಾ ಚಟುವಟಿಕೆ ಹಾಗೂ ವೈವಿಧ್ಯತೆ ಮತ್ತು ವ್ಯಾಪ್ತಿ ಈ ಐದು ಪ್ರಧಾನ ಅಂಶಗಳನ್ನು ಆಧರಿಸಿ ರ‍್ಯಾಂಕಿಂಗ್ ನೀಡುತ್ತದೆ. ದೇಶದ 75 ಅತ್ಯುತ್ತಮ ರಾಜ್ಯ ಸಾರ್ವಜನಿಕ ವಿಶ್ವವಿದ್ಯಾನಿಲಯಗಳ ಪೈಕಿ ಮೈಸೂರು ವಿವಿಗೆ ಈ 8ನೇ ರ‍್ಯಾಂಕಿಂಗ್ ನೀಡಿದೆ ಎಂದು ಅವರು ಹೇಳಿದ್ದಾರೆ.
ಖಾಯಂ ಅಧ್ಯಾಪಕರುಗಳ ಕೊರತೆ ಹಾಗೂ ಇನ್ನಿತರ ಮಿತಿಗಳ ನಡುವೆಯೂ ಮೈಸೂರು ವಿವಿಯು 8ನೇ ಸ್ಥಾನ ಪಡೆದಿರುವುದು ಅಭಿಮಾನದ ಸಂಗತಿಯಾಗಿದೆ. ಇಡೀ ವಿಶ್ವವಿದ್ಯಾನಿಲಯದ ದತ್ತಾಂಶ ಮತ್ತು ದಾಖಲೆಗಳನ್ನು ನಿಖರವಾಗಿ ಹಾಗೂ ಸಮರ್ಪಕವಾಗಿ ಬಿಂಬಿಸಿದ ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಖಾತರಿ ಘಟಕದ (ಐ.ಕ್ಯು.ಎ.ಸಿ) ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಪರಿಶ್ರಮ ಬಹು ಶ್ಲಾಘನೀಯವಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಈ ಯಶಸ್ಸಿಗೆ ಕಾರಣಕರ್ತರಾದ ಸಿಂಡಿಕೇಟ್ ಹಾಗೂ ಶೈಕ್ಷಣಿಕ ಮಂಡಳಿಯ ಸದಸ್ಯರು, ಅಧ್ಯಾಪಕರು, ಸಂಶೋಧಕರು, ವಿದ್ಯಾರ್ಥಿಗಳು, ಅಧಿಕಾರಿಗಳು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ಪೋಷಕರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಕುಲಪತಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…