Mysore
20
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಮೈಸೂರಿನಲ್ಲಿ ಕಿಡಿಗೇಡಿಗಳಿಂದ ಪಾಕಿಸ್ತಾನ್‌ ಪರ ಘೋಷಣೆ

ಮೈಸೂರು: ಮೈಸೂರು ನಗರದ ಡಿಆರ್‌ಸಿ ಮಾಲ್‌ನಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಪರ  ಘೋಷಣೆ ಕೂಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಮೈಸೂರಿನ ಗೋಕುಲಂ ರಸ್ತೆಯಲ್ಲಿರುವ ಡಿಆರ್‌ಸಿ ಫಿಲಂಸ್‌ನಲ್ಲಿ ಸಿನಿಮಾ ವೀಕ್ಷಣೆ ವೇಳೆ ಈ ಘಟನೆ ನಡೆದಿದ್ದು, ಫಿಲಂನ ಆರಂಭದಲ್ಲಿ ವಂದೇ ಮಾತರಂ ಹಾಡು ಬರುವಾಗ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.

ಘೋಷಣೆ ಕೂಗಿದ ನಂತರ ಪರ-ವಿರೋಧಿಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಆರ್‌ಸಿ ಫಿಲಂ ಸೆಕ್ಯೂರಿಟಿ ಹಾಗೂ ಪೊಲೀಸರು ಪಾಕಿಸ್ತಾನ್‌ ಪರ ಘೋಷಣೆ ಕೂಗಿದವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್‌ ಕುಮಾರ್‌ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.

 

Tags:
error: Content is protected !!