ಮೈಸೂರು: ಮೈಸೂರು ನಗರದ ಡಿಆರ್‌ಸಿ ಮಾಲ್‌ನಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಮೈಸೂರಿನ ಗೋಕುಲಂ ರಸ್ತೆಯಲ್ಲಿರುವ ಡಿಆರ್‌ಸಿ ಫಿಲಂಸ್‌ನಲ್ಲಿ ಸಿನಿಮಾ ವೀಕ್ಷಣೆ ವೇಳೆ ಈ ಘಟನೆ ನಡೆದಿದ್ದು, ಫಿಲಂನ ಆರಂಭದಲ್ಲಿ ವಂದೇ ಮಾತರಂ ಹಾಡು ಬರುವಾಗ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.
ಘೋಷಣೆ ಕೂಗಿದ ನಂತರ ಪರ-ವಿರೋಧಿಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಆರ್‌ಸಿ ಫಿಲಂ ಸೆಕ್ಯೂರಿಟಿ ಹಾಗೂ ಪೊಲೀಸರು ಪಾಕಿಸ್ತಾನ್ ಪರ ಘೋಷಣೆ ಕೂಗಿದವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…