ಮೈಸೂರು ನಗರ

ಮೈಸೂರಿನ ಮೂವರು ಪ್ರಾಧ್ಯಾಪಕರಿಗೆ ಪಿಎಚ್‌ಡಿ ಪದವಿ

ಮೈಸೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಮೈಸೂರಿನ ಮೂವರು ಪ್ರಾಧ್ಯಾಪಕರಿಗೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ವಿದ್ಯಾವರ್ಧಕ ಇಂಜಿನಿಯರಿಂಗ್‌ ಕಾಲೇಜಿನಲ್ಲಿ COMPUTER SCIENCE ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಬಿ.ಎಸ್.ಗೌರಿಶಂಕರ್‌ ಅವರು ಡಾ.ನಾಗಪ್ಪ ಯು ಭಜಂತ್ರಿ ಅವರ ಮಾರ್ಗದರ್ಶನದಲ್ಲಿ Automatic transcription for south Indian Music ವಿಷಯದಲ್ಲಿ ಮಂಡಿಸಿದ ಪ್ರೌಢ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಯಲವು ಪಿಎಚ್‌ಡಿ ಪದವಿ ನೀಡಿದೆ.

ಮೈಸೂರಿನ ಎಸ್‌ಜೆಸಿಇ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯ ಪ್ರಾಧ್ಯಾಪಕ ಬಿ.ಎಸ್.ರವಿಶಂಕರ್‌ ಅವರು ಡಾ.ಕೆ.ಟಿ.ವೀರಮಂಜು ಅವರ ಮಾರ್ಗದರ್ಶನದಲ್ಲಿ Impact of Distributed generation on reliability of distribution system ಪ್ರೌಢ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.

ಇನ್ನು ವಿದ್ಯಾವರ್ಧಕ ಇಂಜಿನಿಯರಿಂಗ್‌ ಕಾಲೇಜಿನಲ್ಲಿ INFORMATION SCIENCE ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವಿದ್ಯಾಶ್ರೀ ಕೆ.ಪಿ ಅವರು ಡಾ.ಎ.ಬಿ.ರಾಜೇಂದ್ರ ಅವರ ಮಾರ್ಗದರ್ಶನದಲ್ಲಿ A HYBRID EXPERT FRAME WORK FOR USER REVIEW ANALYSIS USING MACHINE LEARNING TECHNIQUES ವಿಷಯದಲ್ಲಿ ಮಂಡಿಸಿರುವ ಪ್ರೌಢ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿ ನೀಡಿ ಗೌರವಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

7 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

11 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

11 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

12 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

13 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

13 hours ago