ಮೈಸೂರು ನಗರ

ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ: ಸಚಿವ ವಿ.ಸೋಮಣ್ಣ

ಮೈಸೂರು: ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಷ್ಟೇ ಮೈಸೂರಿಗೂ ಆದ್ಯತೆ ನೀಡಲಾಗುವುದು. ವಂದೇ ಭಾರತ್ ಹೆಚ್ಚಿನ‌ ಟ್ರೈನ್‌ಗಳನ್ನು ಓಡಿಸಲಾಗುವುದು. ಒಟ್ಟಾರೆಯಾಗಿ ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ ಪ್ರಾರಂಭಿಸಲಾಗುವುದು ಎಂದರು.

ಇನ್ನು ನಂಜನಗೂಡು ಭಾಗದಲ್ಲಿ ಸೇತುವೆಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಧಿಕಾರಿಗಳು, ಜನಪ್ರತಿನಿಧಿಗಳ ನಡುವೆ ಗೊಂದಲವಿದೆ. ಆ ಕಾರಣಕ್ಕೆ‌ ನಾನೇ ಖುದ್ದು ನಂಜನಗೂಡಿಗೆ ತೆರಳುತ್ತಿರುವೆ ಎಂದು ಹೇಳಿದರು.

ಇದನ್ನು ಓದಿ: ಧರ್ಮಸ್ಥಳ ಪ್ರಕರಣ: ಅಮಿತ್‌ ಶಾ ಭೇಟಿಯಾದ ಸ್ವಾಮೀಜಿಗಳ ನಿಯೋಗ

ಇನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್.15ರಂದು ಮಾತನಾಡಿದ್ದರು. ವಿತ್ತ ಸಚಿವರು ಜಿಎಎಸ್‌ಟಿ‌ ವಿಚಾರದಲ್ಲಿ ಉತ್ತಮ ಕೆಲಸ‌ ಮಾಡುತ್ತಿದ್ದಾರೆ. ದಸರಾ, ದೀಪಾವಳಿಗೆ ರಾಜ್ಯಕ್ಕೆ ಒಳ್ಳೆಯ ಗಿಫ್ಟ್ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಬಿಹಾರದ ಎಲೆಕ್ಷನ್‌ ಇರುವ ಕಾರಣ ಈಗ ಅಭಿವೃದ್ದಿ ಮಾಡ್ತಾರೆ ಎಂಬುದು ಸುಳ್ಳು. ನಾವು ನಿರಂತರ ಅಭಿವೃದ್ಧಿ ಕೆಲಸದಲ್ಲಿ ತೊಡಗಿದ್ದೇವೆ. ತುಮಕೂರಿನಲ್ಲಿ 50 ವರ್ಷಕ್ಕೆ ‌ಬೇಕಾಗುವಷ್ಟು ಕೆಲಸ ತಂದಿದ್ದೇವೆ. ಆ ಕಾರಣಕ್ಕೆ ಪುನಃ ಅಲ್ಲಿ ಚುನಾವಣೆಗೆ ನಿಲ್ಲಲ್ಲ ಎಂದಿರುವೆ ಅಷ್ಟೆ. ಅದು ಬಿಟ್ಟರೆ ಬೇರೂ ಏನೂ ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

4 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

4 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

4 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

4 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

4 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago