ಮೈಸೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನಲೆಯಲ್ಲಿ ಡಿಸೆಂಬರ್.31 ರಂದು ಆಯೋಜಿಸಲಾಗಿದ್ದ ಪೊಲೀಸ್ ಬ್ಯಾಂಡ್ ಮತ್ತು ಪಟಾಕಿ ಪ್ರದರ್ಶನವನ್ನು ರದ್ದು ಮಾಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಜಾರಿಯಲ್ಲಿರುವ ಕಾರಣ ಮೈಸೂರು ಅರಮನೆಯಲ್ಲಿ ಡಿಸೆಂಬರ್.31 ರಂದು ರಾತ್ರಿ 11 ರೀಮದ 12 ಗಂಟೆಯವರೆಗೆ ಪೊಲೀಸ್ ಬ್ಯಾಂಡ್ ಆಯೋಜಿಸಲಾಗಿರುವುದನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 2025ರ ಜನವರಿ ಮುಂಜಾನೆ 12 ರಿಂದ 12.15 ಗಂಟೆಯವರೆಗೂ ಆಯೋಜಿಸಲಾಗಿದ್ದ ಹಸಿರು ಪಟಾಕಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಮಣ್ಯ ಅವರು ತಿಳಿಸಿದ್ದಾರೆ.
ಪ್ರತಿವರ್ಷ ಅರಮನೆ ಆವರಣದಲ್ಲಿ ಅರಮನೆ ಮಂಡಳಿ ವತಿಯಿಂದ ಡಿಸೆಂಬರ್ ತಿಂಗಳ ಕೊನೆಯ ದಿನ ಹಾಗೂ ಜನವರಿ ಮೊದಲ ದಿನದಂದು ಸಾರ್ವಜನಿಕರಿಗಾಗಿ ಮಧ್ಯರಾತ್ರಿ ವೇಳೆ ಪೊಲೀಸ್ ಬ್ಯಾಂಡ್ ಹಾಗೂ ಹಸಿರು ಪಟಾಕಿ ಪ್ರದರ್ಶನವನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಕಾಲ ಶೋಕಾಚರಣೆ ಜಾರಿಯಲ್ಲಿರುತ್ತದೆ ಎಂದು ಆದೇಶ ಹೊರಡಿಸಲಾಗಿದೆ. ಹೀಗಾಗಿ ಈ ವರ್ಷ ಆ ಎರಡೂ ದಿನಗಳ ಕಾಲ ಪೊಲೀಸ್ ಬ್ಯಾಂಡ್ ಮತ್ತು ಹಸಿರು ಪಟಾಕಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…