ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್ ಸೈಲೆನ್ಸರ್‌ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ.
ಕಳೆದ ಕೆಲ ದಿನಗಳಿಂದ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಕರ್ಕಶ ಶಬ್ಧ ಮಾಡುತ್ತಿದ್ದ 90 ಕ್ಕೂ ಹೆಚ್ಚು ಬೈಕ್‌ಗಳನ್ನು ಸೀಜ್ ಮಾಡಿದ್ದರು.
ಇದೀಗ ಇಂದು ಬೆಳಿಗ್ಗೆ ಬೈಕ್‌ಗಳ 217 ಸೈಲೆನ್ಸರ್‌ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ.
ಇದೆಲ್ಲಾ ಬೆಳವಣಿಗೆಗಳ ನಡುವೆ ಕಾನೂನು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದು, ಸೀಜ್ ಮಾಡಿದ ವಾಹನಗಳಿಗೆ ಫೈನ್ ಹಾಕಿದ್ದಲ್ಲದೇ ವಾರ್ನಿಂಗ್ ಕೊಟ್ಟು ರಿಲೀಸ್ ಮಾಡಿದ್ದಾರೆ.
ಈ ಮೂಲಕ ಮೈಸೂರು ನಗರದಾದ್ಯಂತ ಕಾನೂನು ನಿಯಮ ಉಲ್ಲಂಘನೆ ಮಾಡುವವರಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಆಗದಂತೆ ಸೂಚನೆ ನೀಡಲಾಗಿದೆ.
ಒಂದು ವೇಳೆ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಬೈಕ್ ಸೀಜ್ ಮಾಡುವುದರ ಜೊತೆಗೆ ಇನ್ನು ಹೆಚ್ಚಿನ ದಂಡ ವಿಧಿಸಲು ಪೊಲೀಸರು ಪ್ಲಾನ್ ಮಾಡಿದ್ದಾರೆ.
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…
೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…
ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…