ಮೈಸೂರು: ನಾಳೆ ಮೈಸೂರು ನಗರದಲ್ಲಿ ನಡೆಯಲಿರುವ ಸಾಮೂಹಿಕ ಗಣಪತಿ ವಿಸರ್ಜನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಪೊಲೀಸರ ಬ್ರೀಫಿಂಗ್ ಸಭೆ ನಡೆಸಲಾಯಿತು.
ಮೈಸೂರು ನಗರ ಸಶಸ್ತ್ರ ದಳ ಮೈದಾನದಲ್ಲಿ ಇಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು & ಸಿಬ್ಬಂದಿಗಳಿಗೆ ಬ್ರಿಫಿಂಗ್ ಸಭೆ ನಡೆಸಲಾಯಿತು.
ಸಭೆಯಲ್ಲಿ ಭದ್ರತೆ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಯಿತು.





