ಮೈಸೂರು ನಗರ

ಪ್ರಯಾಣಿಕರ ಸುರಕ್ಷತೆಗೆ ಮುಂದಾದ ಪೊಲೀಸ್ ಅಧಿಕಾರಿ: ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ

ಮೈಸೂರು: ಸರ್ಕಾರಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಸಿಲುಕಿ ಹೊರಬಂದು ಅಸಹಾಯಕರಾಗಿ ನಿಂತಿದ್ದ ಚಾಮುಂಡಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿರವರು ಧಾವಿಸಿ ಸಾರ್ವಜನಿಕ ಕಳಕಳಿ ಮೆರೆದಿದ್ದಾರೆ. ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಆತಂಕ ದೂರವಾಗಿದ್ದು, ಬಿಂದುಮಣಿ ಅವರ ಸರಳತೆಗೆ ಚಾಮುಂಡಿ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಂದು ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಎಂದಿನಂತೆ ಚಾಮುಂಡಿ ಬೆಟ್ಟಕ್ಕೆ ತೆರಳಲು ಭಕ್ತರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಉಚಿತ ಸಾರಿಗೆ ಬಸ್ ಹತ್ತಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಮಾರ್ಗಮಧ್ಯೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಒಳಗಾಗಿದ್ದರು. ಇದೇ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ರವರು ತಮ್ಮ ಅಧಿಕೃತ ವಾಹನದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದಾಗ ಆತಂಕದಲ್ಲಿ ಸಿಲುಕಿದ್ದ ಪ್ರಯಾಣಿಕರ ಪರಿಸ್ಥಿತಿಗೆ ಸ್ಪಂದಿಸಿದ್ದಾರೆ.

ತಮ್ಮ ವಾಹನದಿಂದ ಇಳಿದು ಪ್ರಯಾಣಿಕರಿಗೆ ಧೈರ್ಯತುಂಬಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರಿಗೆ ಬೆಟ್ಟಕ್ಕೆ ತೆರಳಲು ಅನುವು ಮಾಡಿಕೊಟ್ಟಿದ್ದಾರೆ. ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿದು ನಂತರ ಸುಸ್ಥಿತಿಗೆ ತಲುಪಿದ್ದನ್ನ ಖಚಿತಪಡಿಸಿಕೊಂಡು ಪ್ರಯಾಣಿಕರಿಗೆ ತೆರಳಲು ಅನುಕೂಲ ಮಾಡಿಕೊಟ್ಟಿದ್ದಾರೆ. ಡಿಸಿಪಿ ಬಿಂದುಮಣಿ ಅವರ ಸರಳತೆ ಹಾಗೂ ಸಮಯಪ್ರಜ್ಞೆ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಗಮನ ಹರಿಸಿದ ಪೊಲೀಸ್ ಅಧಿಕಾರಿಯ ಬದ್ಧತೆ ಸಾರ್ವಜನಿಕ ಕಳಕಳಿಗೆ ಒಂದು ಮಾದರಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

9 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago