ಮೈಸೂರು: ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡುತ್ತೇವೆ. ಗುರುವಾರ ರಾತ್ರಿ 10ರಿಂದಲೇ ಎಲ್ಲಾ ರಸ್ತೆ ಬಂದ್ ಆಗುತ್ತವೆ. ಚಾಮುಂಡಿ ಬೆಟ್ಟದ ನಿವಾಸಿಗಳಿಗೆ ಮಾತ್ರ ಬೆಟ್ಟದ ಮೇಲೆ ಹೋಗಲು ಅವಕಾಶವಿರಲಿದೆ.
4 ಡಿಸಿಪಿ, 2 ಎಎಸ್ಪಿ ಸೇರಿದಂತೆ 1470 ಪೊಲೀಸರು ಕೆಲಸ ಮಾಡುತ್ತಾರೆ. ದಿನದ 24 ಗಂಟೆ ಪೊಲೀಸ್ ಭದ್ರತೆ ಇರುತ್ತದೆ. ಹಲವೆಡೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದ ರೀತಿ ಭದ್ರತೆ ಮಾಡಿಕೊಂಡಿದ್ದೇವೆ ಎಂದು ಪೊಲೀಸ್ ಭದ್ರತೆ ಬಗ್ಗೆ ಮಾಹಿತಿ ನೀಡಿದರು.