ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ ನಗರ ಪೊಲೀಸ್ ಆಯುಕ್ತರೊಂದಿಗೆ ಅಪರಾಧ ತಡೆ ಹಾಗೂ ಇನ್ನಿತರ ವಿಚಾರಗಳ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿದರು.
ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರ ನಿರ್ದೇಶನದ ಮೇರೆಗೆ ನಗರದ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಮತ್ತು ಅಪರಾಧಗಳ ಕುರಿತು ಭದ್ರತಾ ಪರಿಶೀಲನಾ ಸಭೆ ನಡೆಸಲಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪೊಲೀಸ್ ಮೂಲಗಳ ಪ್ರಕಾರ, ಎಡಿಜಿಪಿ ಅವರು ಗುಪ್ತಚರ ವಿಭಾಗದ ಮಾಹಿತಿ ಸಂಗ್ರಹಣೆಯ ಜವಾಬ್ದಾರಿ, ಕಮಿಷನರೇಟ್‌ನಲ್ಲಿರುವ ವಿವಿಧ ಘಟಕಗಳ ಕಾರ್ಯನಿರ್ವಹಣೆ, ಸೈಬರ್ ಅಪರಾಧ ಕೋಶ, ವಿಽವಿಜ್ಞಾನ ಕೋಶ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಸಂಬಂಽಸಿದ ಗುಪ್ತಚರ ಕಾರ್ಯಾಚರಣೆ, ಕರ್ನಾಟಕ ರಾಜ್ಯಕೈಗಾರಿಕಾ ಭದ್ರತಾ ಪಡೆ ಸೇರಿದಂತೆ ವಿಶೇಷ ವಿಭಾಗಗಳ ಕಾರ್ಯವೈಖರಿಯನ್ನು ಎಡಿಜಿಪಿ ಪರಿಶೀಲಿಸಿದರು.
ಈ ವೇಳೆ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಹಾಗೂ ದೇಶದ ಇತರೆಡೆಗಳಲ್ಲಿ ಕಾಲ್ತುಳಿತ ಪ್ರಕರಣಗಳು ನಡೆದಿವೆ. ಈ ವೇಳೆ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದರೂ ಅದಕ್ಕೆ ತಕ್ಕಂತೆ ಸಾಂದರ್ಭಿಕ ದಾಖಲೆಗಳು ಇರುವುದಿಲ್ಲ. ನಾನು ಉತ್ತರ ಕರ್ನಾಟಕದಲ್ಲಿ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಇಂತಹ ಕೆಟ್ಟ ಅನುಭವ ನನಗೂ ಆಗಿದೆ ಎಂದರು.
ಇದನ್ನು ಓದಿ: ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
ಯಾವುದೇ ದೊಡ್ಡ ಮಟ್ಟದ ಸಭೆ, ಸಮಾರಂಭಗಳು ನಡೆದ ವೇಳೆ ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಂತರ ಇಡೀ ಸಮಾರಂಭದ ವಿಡಿಯೋ ಚಿತ್ರಣ ಹಾಗೂ ಫೋಟೋಗಳನ್ನು ತೆಗೆದು ಸಂಗ್ರಹಿಸಿಟ್ಟುಕೊಳ್ಳಬೇಕು. ಅವಘಡ ನಡೆದ ವೇಳೆ ವಿನಾಕಾರಣ ತಪ್ಪನ್ನು ಪೊಲೀಸರ ಮೇಲೆ ಹೊರಿಸುವುದನ್ನು ತಪ್ಪಿಸಬಹುದು ಎಂದು ಸಲಹೆ ನೀಡಿದರು.
ಪೊಲೀಸ್ ಅಧಿಕಾರಿಗಳು ಯಾರನ್ನೂ ಓಲೈಕೆ ಮಾಡಬಾರದು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಒಬ್ಬರನ್ನು ಓಲೈಕೆ ಮಾಡಲು ಹೋದಲ್ಲಿ ಉಳಿದ ಸಿಬ್ಬಂದಿಗಳ ಸಹಕಾರ ನಿಮಗೆ ಸಿಗುವುದಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎಂದು ಕಿವಿಮಾತು ಹೇಳಿದರು.
ಪೊಲೀಸ್ ಎಂದರೆ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವವರು ಎಂಬ ನಂಬಿಕೆ ಜನರಲ್ಲಿ ಇದೆ. ಅಪರಾಧ ಪ್ರಕರಣಗಳನ್ನು ಹತ್ತಿಕ್ಕಬೇಕಾದ ಪೊಲೀಸರೇ ಅಪರಾಧಿಗಳ ಜೊತೆ ಕೈ ಜೋಡಿಸುವುದು ಅಪಾಯಕಾರಿ ಬೆಳವಣಿಗೆ. ಇಂತಹ ಘಟನೆಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುತ್ತದೆ. ಹೀಗಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.
ಕೆಲ ಪೊಲೀಸರು ಸಮಾಜದ ಒಳಿತಿಗೆ ಒಳ್ಳೆಯ ಕೆಲಸಗಳನ್ನು ಮಾಡುತ್ತಾರೆ. ಒಬ್ಬರ ಜೀವ ಉಳಿಸುವುದು, ಕಳ್ಳತನ ತಪ್ಪಿಸುವುದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುವುದು ಸೇರಿದಂತೆ ಇನ್ನಿತರ ಒಳ್ಳೆಯ ಕೆಲಸಗಳನ್ನು ಪೊಲೀಸರು ಕೂಡ ಮಾಡಿರುತ್ತಾರೆ. ಈ ನಿಮ್ಮ ಒಳ್ಳೆಯ ಕೆಲಸಗಳು ಜನರಿಗೆ ತಲುಪಬೇಕು. ಪೊಲೀಸರಲ್ಲಿಯೂ ಮಾನವೀಯ ಗುಣಗಳಿವೆ ಎಂಬುದನ್ನು ಸಮಾಜದ ಮುಂದಿಡಬೇಕು. ಇದರಿಂದಾಗಿ ಪೊಲೀಸರೆಂದರೆ ಕೆಟ್ಟದಾಗಿ ಯೋಚಿಸುವ ಜನರಲ್ಲಿ ನಿಮ್ಮ ಮೇಲೆ ಹಾಗೂ ಇಲಾಖೆಯ ಮೇಲೆ ವಿಶ್ವಾಸ ಮೂಡುತ್ತದೆ ಎಂದರು.
ಇದೇ ವೇಳೆ ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳ ಕಾರ್ಯವೈಖರಿ, ಅಪರಾಧ ಪತ್ತೆ, ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳು, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬಗ್ಗೆ ಅಲ್ಲಿನ ಠಾಣಾಽಕಾರಿಗಳಿಂದ ಮಾಹಿತಿ ಪಡೆದರು.
ಎಡಿಜಿಪಿ ಅವರನ್ನು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಬರಮಾಡಿಕೊಂಡರು. ಅವರಿಗೆ ಪೊಲೀಸ್ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಡಿಸಿಪಿಗಳಾದ ಆರ್.ಎನ್.ಬಿಂದುಮಣಿ, ಕೆ.ಎಸ್.ಸುಂದರರಾಜ್, ಎ.ಮಾರುತಿ ಹಾಗೂ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…