ಮೈಸೂರು ನಗರ

ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ಕ್ರಾಂತಿ ಆಗಬಹುದು: ಶಾಸಕ ತನ್ವೀರ್‌ ಸೇಠ್‌

ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವಾಗ ಬೇಕಾದರೂ ಕ್ರಾಂತಿ ಆಗಬಹುದು ಎಂದು ಶಾಸಕ ತನ್ವೀರ್‌ ಸೇಠ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸೆಪ್ಟಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು. ಸಿಎಂ ಬದಲಾವಣೆ ವೇಳೆ ವಿಚಾರ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಐದು ವರ್ಷ ಸುಭದ್ರ ಸರ್ಕಾರ ಕೊಡಬೇಕಾದದ್ದು ನಮ್ಮ‌ ಜವಾಬ್ದಾರಿ. ಪಕ್ಷದಿಂದ ಸರ್ಕಾರ ಬಂದಿದೆ. ಸರ್ಕಾರದಿಂದ ಪಕ್ಷ ಬಂದಿಲ್ಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ನಾನು ನೂರು ವರ್ಷ ಬದುಕಬೇಕು ಅಂದುಕೊಂಡ್ರೂ, ನನ್ನಿಂದ ಸಾಧ್ಯನಾ ಎಂದು ನೋಡಬೇಕು. ಮಾರನೇ ದಿನ ಬೆಳಿಗ್ಗೆ ನನಗೆ ಆಗುತ್ತೋ ಇಲ್ವೋ‌ ಗೊತ್ತಿಲ್ಲ. ಸಿದ್ದರಾಮಯ್ಯ ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಇರುತ್ತಾರೊ ಅಲ್ಲಿಯವರೆಗೆ ಅವರೇ ನಮ್ಮ ಮುಖ್ಯಮಂತ್ರಿಗಳು. ಬದಲಾವಣೆ ಇಲ್ಲ ಅಂತ ಎಲ್ಲೂ ಇಲ್ಲ. ಅದು ಐದು ವರ್ಷಗಳ ಕಾಲ ಇರಬಹುದು. ಅಧಿಕಾರ ಬದಲಾವಣೆ ಸೂತ್ರ ನಮಗೆ ಗೊತ್ತಿಲ್ಲ. ವರಿಷ್ಟರ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದರು.

ಇನ್ನು ಡಿ.ಕೆ.ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಶಾಸಕರ ಬೆಂಬಲ ಪಕ್ಷಕ್ಕೆ ಇದೆ. ಯಾರೋ ಮಾತಾಡಿದಕ್ಕೆ ಪ್ರತಿಕ್ರಿಯೆ ಕೊಡುತ್ತಾ ಹೋದರೆ, ಅದಕ್ಕೆ ಕೊನೆ ಇಲ್ಲ. ಯಾರು ಯಾವ ಸನ್ನಿವೇಶದಲ್ಲಿ ಮಾತಾಡಿದ್ದಾರೆ ನನಗೆ ಗೊತ್ತಿಲ್ಲ ಎಂದರು.

ಇನ್ನು ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಕೇಳಿಕೊಳ್ಳುತ್ತೇನೆ. ನಾವು ಬೇರೇ ಇನ್ನೇನು ಹೇಳಲ್ಲ. ಏನು ಬೇಕಾದರೂ ಆಗಬಹುದು. ಸಂಪುಟ ಪುನರ್ ರಚನೆ ಯಾವಾಗ ಬೇಕಾದರೂ ಆಗಬಹುದು. ಆಗೋವರೆಗೂ ಪಕ್ಷದ ಮೇಲೆ ನಂಬಿಕೆ ಇಟ್ಟು ಕಾಯುತ್ತೇನೆ. ನನಗೆ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆ ಇಟ್ಟುಕೊಂಡಿದ್ದೇನೆ. ನಾನು ಕೂಡ ಸನ್ಯಾಸಿ ಅಲ್ಲ. ನಿರೀಕ್ಷೆ ಎಲ್ಲರಿಗೂ ಇದೆ. ಅವಕಾಶ ಸಿಕ್ಕಿಲ್ಲ, ಸಿಕ್ಕಾಗ ಕೆಲಸ ಮಾಡುತ್ತೇನೆ. ಆದಾಗ ಆಗುತ್ತದೆ ಎಂದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

15 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

15 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

22 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

22 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

22 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

22 hours ago