ಮೈಸೂರು ನಗರ

ಸಿಎಂ ವಿರುದ್ಧ ರಾಜಕೀಯ ಪಿತೂರಿ ಕೇಸ್‌: ಹೆಚ್‌.ಸಿ.ಮಹದೇವಪ್ಪ

ಮೈಸೂರು: ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಬಿಜೆಪಿ ಪಕ್ಷ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ.ಮಹದೇವಪ್ಪ ಹೇಳಿದ್ದಾರೆ.

ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಶಾಸಕರು ಮುದ್ರೆ ಒತ್ತಿದ್ದಾರೆ. ಹೈಕಮಾಂಡ್‌ ಕೂಡ ಅದನ್ನೇ ಹೇಳಿದೆ. ಹೀಗಾಗಿ ಸಿಎಂ ತಮ್ಮ ಸ್ಥಾನದಲ್ಲಿ ಗಟ್ಟಿಯಾಗಿಯೇ ಇದ್ದಾರೆ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಲೋಕಾಯುಕ್ತ ಕ್ಲೀನ್‌ಚಿಟ್‌ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ವಿರೋಧ ಪಕ್ಷಗಳು ನಡೆಸಿದ ರಾಜಕೀಯ ಪಿತೂರಿ ಕೇಸ್‌ ಇದು. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎಂದು ನಮಗೂ ಗೊತ್ತಿತ್ತು.  ಲೋಕಾಯುಕ್ತ ಕ್ಲೀನ್‌ಚಿಟ್‌ ನೀಡಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

1 hour ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

2 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

2 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

2 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

2 hours ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

12 hours ago