ಮೈಸೂರು: ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ನೀಡುವ ಹೇಳಿಕೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಗೃಹ ಸಚಿವರಿಗೆ ಪೊಲಿಟಿಕಲ್ ವೈರಾಗ್ಯ ಬಂದ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದೇವಪ್ಪ ಹೇಳುತ್ತಾರೆ ಸಿಎಂ ರೆಕಾರ್ಡ್ ಮಾಡಬೇಕು ಅಂತಾರೆ. ಮಹದೇವಪ್ಪ ಅವರೇ, ಎಷ್ಟು ವರ್ಷ ಆಡಳಿತ ನಡೆಸಿದ್ದೀರಿ ಅನ್ನೋದಲ್ಲ. ಈ ನಾಡಿನ ಜನರ ಎಷ್ಟು ಸಮಸ್ಯೆ ಬಗೆಹರಿಸಿದ್ದೀರಿ ಅನ್ನೋದು ಮುಖ್ಯ. ನಮಗೆ 20 ತಿಂಗಳ, 14 ತಿಂಗಳ ಆಡಳಿತ ತೃಪ್ತಿಯಿದೆ. ಗ್ಯಾರಂಟಿ ಯೋಜನೆ ಯಾರಪ್ಪನ ದುಡ್ಡು. ಮೆಟ್ರೋ ದರ ಏರಿಸಿ ಹಣ ಕೊಡೋಕೆ ನೀವೇ ಆಗಬೇಕಾ? ಈ ರೀತಿ ದರ ಏರಿಸಿದರೆ ನಾನು 10 ಸಾವಿರ ರೂ ಕೊಡುತ್ತೇನೆ ಎಂದು ಟಾಂಗ್ ಕೊಟ್ಟರು.
ಇನ್ನು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂಟೆಗಟ್ಟಲೇ ಕಲ್ಲು ತೆಗೆದುಕೊಂಡು ಬಂದು ಹೊಡೆದವರನ್ನು ರಕ್ಷಣೆ ಮಾಡಬೇಕಾ ಎಂದು ಪ್ರಶ್ನೆ ಮಾಡಿದರು.
ಇನ್ನು ಯಾರನ್ನೋ ಓಲೈಸಲು ಸರ್ಕಾರ ಇಲ್ಲ. ಕಾನೂನು ಬಾಹಿರ ಚಟುವಟಿಕೆ ನಡೆಸುವವನು ಯಾರೇ ಆಗಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇದು ರಾಜ್ಯ ಸರ್ಕಾರದ ಕರ್ತವ್ಯ ಎಂದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…