Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಾಲಿನ್ಯ ನಿಯಂತ್ರಣ ಮಂಡಳಿಗೆ 50ರ ಸಂಭ್ರಮ ; ಅ.27ರಂದು ಸುವರ್ಣ ಮಹೋತ್ಸವ

ಮೈಸೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು ೫೦ ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅ.೨೭ರಂದು ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅ.೨೭ರಂದು ಕಾರ್ಯಕ್ರಮ ಆಯೋಜಿಸಲು ಉತ್ತಮ ಸ್ಥಳವನ್ನು ಗುರುತಿಸಬೇಕು. ಕಾರ್ಯಕ್ರಮವನ್ನು ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೇರಿದಂತೆ ಸಂಘಟಿಸಲಾಗುವುದು. ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಪರಿಸರ ವಾದಿಗಳು, ಕೈಗಾರಿಕೋದ್ಯಮಿಗಳು ಭಾಗವಹಿಸಲು ಆಹ್ವಾನ ನೀಡಬೇಕು ಎಂದರು.

ಇದನ್ನೂ ಓದಿ :-ಮೈಸೂರು | ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆಗೆ ಪೊಲೀಸ್‌ ನೋಟಿಸ್‌

ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿರುತ್ತದೆ. ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದರು.

ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಘನ ತ್ಯಾಜ್ಯ, ಜಲ, ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಮಾಡಲಾಗುವುದು. ಪರಿಸರ ಸಂರಕ್ಷಣೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ನಗರ ವಿಭಾಗದ ಪರಿಸರ ಅಧಿಕಾರಿ ವಿ.ಎಸ್. ಕುಮಾರ್, ಗ್ರಾಮೀಣ ವಿಭಾಗದ ಪರಿಸರ ಅಧಿಕಾರಿ ವಿ.ಸುನಿಲ್ ಮತ್ತಿತರರು ಹಾಜರಿದ್ದರು.

Tags:
error: Content is protected !!