ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಪರಮಪೂಜ್ಯ ಶ್ರೀ ಸೋಮೇಶ್ವರ ನಾಥ ಸ್ವಾಮೀಜಿ ಅವರು, ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಜನರು ಈಗ ಜಾತಿ, ಮತ, ಪಂಥ, ಧರ್ಮದ ಬದುಕು ಕಟ್ಟಿಕೊಂಡಿದ್ದಾರೆ. ಇಂತಹ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ. ಕೆಂಪೇಗೌಡರ ಜಯಂತಿಯು ಪಕ್ಷಾತೀತ ಹಾಗೂ ಜಾತ್ಯಾತೀತ ಕಾರ್ಯಕ್ರಮವಾಗಿದೆ. ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಮಹನೀಯರ ಆದರ್ಶಗಳನ್ನು ಯುವಜನರಿಗೆ ತಿಳಿಸಿಕೊಡಲು ಅವರ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಎಸ್.ಶ್ರೀವತ್ಸ, ಜಿ.ಟಿ ದೇವೇಗೌಡ, ಹರೀಶ್ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.





