ಮೈಸೂರು: ಇನ್ನೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್ ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸಲಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚಿಕೆ ವಿಚಾರದಲ್ಲಿ ನಮ್ಮ ಹೈಕಮಾಂಡ್ ಮೊದಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು. ಈ ವಿಚಾರದಲ್ಲಿ ಒಪ್ಪಂದ ಆಗಿದೆಯೋ? ಇಲ್ಲವೋ ನನಗೆ ಗೊತ್ತಿಲ್ಲ. ಈ ಗೊಂದಲ ಮಾತ್ರ ಎರಡೂವರೆ ವರ್ಷದಿಂದ ಮುಂದುವರಿದಿದೆ. ಅದು ಅಪಾಯಕಾರಿ ಹಂತ ತಲುಪುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಆದಷ್ಟು ಬೇಗ ಹೈಕಮಾಂಡ್ ತನ್ನ ನಿರ್ಧಾರ ಹೇಳಲಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಪಕ್ಷಕ್ಕೇನು ನಷ್ಟ ಇಲ್ಲ ಎಂದು ಹೇಳಿದರು.
ಇನ್ನು ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆದ ಸಂದರ್ಭದಲ್ಲಿ ಯಾರು ಇರಲಿಲ್ಲ. ಯಾರು ಮಾತು ಕೊಟ್ಟಿದ್ದಾರೆ? ಯಾರು ಮಾತು ಕೊಟ್ಟಿಲ್ಲ? ಯಾರು ಮಾತು ತಪ್ಪಿದ್ದಾರೆಂದು ಮಾತುಕತೆ ವೇಳೆ ಇದ್ದವರಿಗೆ ಗೊತ್ತು. ಕಾಂಗ್ರೆಸ್ ಶಾಸಕರ ಮುಂದೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.





