Mysore
25
overcast clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಅರಮನೆಯ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಸಂಪ್ರದಾಯದಂತೆ ಇಂದು ಬೆಳಿಗ್ಗೆ ದೇವಾಲಯಕ್ಕೆ ಭೇಟಿ ನೀಡಿದ ಪ್ರಮೋದಾದೇವಿ ಒಡೆಯರ್‌ ಅವರು, ಸುಮಾರು 10 ನಿಮಿಷಗಳ ಕಾಲ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ತ್ರಿನೇಶ್ವರ ದೇವಾಲಯದ ಸುತ್ತಲೂ ಇರುವ ಗುಡಿಗಳಿಗೆ ನಮಸ್ಕರಿಸಿದ ಬಳಿಕ ದೇವಸ್ಥಾನ ಸುತ್ತಲೂ ಪ್ರದಕ್ಷಿಣೆ ಹಾಕಿ ನಮಸ್ಕರಿಸಿದರು. ಬಳಿಕ ಕೆಲ ಸಮಯ ದೇವಸ್ಥಾನದ ಆವರಣದಲ್ಲಿ ಕುಳಿತರು. ಈ ವೇಳೆ ರಾಜವಂಶಸ್ಥೆ ಪ್ರಮೋದಾ ದೇವಿ ಅವರನ್ನು ಕಂಡು ಭಕ್ತರು ಕಾಲಿಗೆ ಬಿದ್ದು ನಮಸ್ಕರಿಸಿದರು.

Tags:
error: Content is protected !!