ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಅರಮನೆಯ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.
ಸಂಪ್ರದಾಯದಂತೆ ಇಂದು ಬೆಳಿಗ್ಗೆ ದೇವಾಲಯಕ್ಕೆ ಭೇಟಿ ನೀಡಿದ ಪ್ರಮೋದಾದೇವಿ ಒಡೆಯರ್ ಅವರು, ಸುಮಾರು 10 ನಿಮಿಷಗಳ ಕಾಲ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ತ್ರಿನೇಶ್ವರ ದೇವಾಲಯದ ಸುತ್ತಲೂ ಇರುವ ಗುಡಿಗಳಿಗೆ ನಮಸ್ಕರಿಸಿದ ಬಳಿಕ ದೇವಸ್ಥಾನ ಸುತ್ತಲೂ ಪ್ರದಕ್ಷಿಣೆ ಹಾಕಿ ನಮಸ್ಕರಿಸಿದರು. ಬಳಿಕ ಕೆಲ ಸಮಯ ದೇವಸ್ಥಾನದ ಆವರಣದಲ್ಲಿ ಕುಳಿತರು. ಈ ವೇಳೆ ರಾಜವಂಶಸ್ಥೆ ಪ್ರಮೋದಾ ದೇವಿ ಅವರನ್ನು ಕಂಡು ಭಕ್ತರು ಕಾಲಿಗೆ ಬಿದ್ದು ನಮಸ್ಕರಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…