ಮೈಸೂರು: ಆಸ್ತಿ ರಕ್ಷಣೆ ಕೋರಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ವಹಿವಾಟುಗಳನ್ನು ನಡೆಸದಂತೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಮೈಸೂರು ಮಹಾರಾಜರು ಮತ್ತು ಭಾರತ ಸರ್ಕಾರದ ನಡುವೆ 1950ರ ಜನವರಿ.6ರಲ್ಲಿ ನಡೆದ ಒಪ್ಪಂದದ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿನ ಸ್ವತ್ತುಗಳು ಮೈಸೂರು ಮಹಾರಾಜರ ಖಾಸಗಿ ಸ್ವತ್ತು ಎಂದು ಒಪ್ಪಂದವಾಗಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ಅರ್ಜಿ ಬಂದಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಇದನ್ನು ಪರಿಶೀಲನೆ ಮಾಡಲು ತಹಶೀಲ್ದಾರ್ ಗಿರಿಜಾ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.