ಮೈಸೂರು ನಗರ

ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದ ಪ್ರಮೋದಾದೇವಿ ಒಡೆಯರ್:‌ ಕಾರಣ ಏನ್‌ ಗೊತ್ತಾ.?

ಮೈಸೂರು: ಆಸ್ತಿ ರಕ್ಷಣೆ ಕೋರಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಪತ್ರ ಬರೆದಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ವಹಿವಾಟುಗಳನ್ನು ನಡೆಸದಂತೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಮೈಸೂರು ಮಹಾರಾಜರು ಮತ್ತು ಭಾರತ ಸರ್ಕಾರದ ನಡುವೆ 1950ರ ಜನವರಿ.6ರಲ್ಲಿ ನಡೆದ ಒಪ್ಪಂದದ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿನ ಸ್ವತ್ತುಗಳು ಮೈಸೂರು ಮಹಾರಾಜರ ಖಾಸಗಿ ಸ್ವತ್ತು ಎಂದು ಒಪ್ಪಂದವಾಗಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರಿಂದ ಅರ್ಜಿ ಬಂದಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ಇದನ್ನು ಪರಿಶೀಲನೆ ಮಾಡಲು ತಹಶೀಲ್ದಾರ್‌ ಗಿರಿಜಾ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

17 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

18 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

19 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

19 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

21 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

21 hours ago