ಮೈಸೂರು ನಗರ

ಚಾಮುಂಡಿ ಚಲೋಗೆ ಬಂದ ಪ್ರತಾಪ್‌ ಸಿಂಹ ಪೊಲೀಸ್‌ ವಶಕ್ಕೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು.

ಚಾಮುಂಡಿ ಚಲೋಗೆ ಬಂದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಾಪ್‌ ಸಿಂಹ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಾಪ್‌ ಸಿಂಹ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಸಿದ್ದರಾಮಯ್ಯ ಕಾರಣ. ನಾವು ಬೆಟ್ಟಕ್ಕೆ ಹೋಗುವುದಕ್ಕೂ ತಡೆ ಮಾಡುತ್ತಾ ಇದ್ದಾರೆ. ಸಂವಿಧಾನದಲ್ಲಿ ಪ್ರತಿಭಟನೆ ಮಾಡಲು ಹಕ್ಕಿದೆ. ನಮ್ಮ ಹಕ್ಕನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಬಾನು ಮುಷ್ತಾಕ್ ಕನ್ನಡದ ಬಗ್ಗೆ ಬಾವುಟದ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ಬಾನು ಮುಷ್ತಾಕ್ ಕ್ಷಮೆ ಕೇಳುವ ಗೋಜಿಗೂ ಹೋಗಲಿಲ್ಲ. ಅವರು ಕ್ಷಮೆ ಕೇಳಿದ್ರೆ ನಾವು ಚಾಮುಂಡಿ ಚಲೋ ಮಾಡುತ್ತಿರಲಿಲ್ಲ. ಪ್ರತಿಭಟನೆಗೆ ಅವಕಾಶ ಕೊಡದೇ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗ ಈ ರೀತಿಯ ಘಟನೆಗಳು ನಡೆಯುತ್ತದೆ. ಸಿದ್ದರಾಮಯ್ಯ ಸಿಎಂ ಆಗಿ ಏಳುವರೆ ವರ್ಷ ಆಯ್ತು ಪೂರೈಸಿದ್ದಾರೆ. ನೆನಪಿಟ್ಟುಕೊಳ್ಳುವ ಒಂದು ಕೆಲಸ ಮಾಡಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸಗಳು ನಿರಂತರವಾಗಿ ಆಗುತ್ತಿವೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago