ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಅಭ್ಯರ್ಥಿಗೂ ಆಕಾಂಕ್ಷಿಗೂ ವ್ಯತ್ಯಾಸ ಇದ್ದು, ವ್ಯತ್ಯಾಸ ಗೊತ್ತಿಲ್ಲದೇ ಕೆಲವರು ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ಅಭ್ಯರ್ಥಿ ಯಾರೆಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ. ಮುಂದೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಚಾಮರಾಜ ಕ್ಷೇತ್ರದ ಜನ ವಿದ್ಯಾವಂತ ಪ್ರತಿನಿಧಿ ಬಯಸುತ್ತಾರೆ. ವಾಸು, ಎಚ್.ಎಸ್.ಶಂಕರಲಿಂಗೇಗೌಡರ ಹಾದಿಯನ್ನು ತಾನು ನಡೆಯುತ್ತೇನೆ ಎಂದು ಹೇಳಿದರು.
ಈ ಮೂಲಕ ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಕೊಂಚ ಬೇಸರದಲ್ಲಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕೀಯಕ್ಕೆ ಧುಮುಕಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.





