ಮೈಸೂರು: ಪ್ರತಿ ಬಾರಿಯೂ ಯುದ್ಧ ನಡೆದ ಸಂದರ್ಭದಲ್ಲಿ ಪಾಕಿಸ್ತಾನಕ್ಕಿಂತಲೂ ಮೊದಲು ಸಾಕ್ಷಿ ಕೇಳುವುದು ಕಾಂಗ್ರೆಸ್ ನವರು. ಹಿಂದಿನ ಸಂದರ್ಭದಲ್ಲೂ ಅವರು ಅದೇ ಕೆಲಸ ಮಾಡಿದರು. ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್ ಅಲ್ವಾ? ಹೀಗಾಗಿ ಅವರಿಗೆ ಎಲ್ಲದಕ್ಕೂ ಸಾಕ್ಷಿ ಬೇಕು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ. ಕೊತ್ತೂರು ಮಂಜುನಾಥ್ ಅವರಿಗೆ ಈ ದೇಶದ ಬಗ್ಗೆ ಏನು ಗೊತ್ತಿದೆ? ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೆ ಮಂಜುನಾಥ್ ಹೇಳ್ತಾರೆ. ಕೊತ್ತೂರು ಮಂಜುನಾಥ್ ಹೋಗಿ ಅವರ ನಾಯಕ ಶಶಿ ತರೂರು ಅವರಲ್ಲಿ ಕೇಳಲಿ, ಶಶಿ ತರೂರು ಅವರೇ ಸರಿಯಾಗಿ ಉತ್ತರ ಕೊಡ್ತಾರೆ. ಈ ರೀತಿ ಮಾತನಾಡುವುದು ಕಾಂಗ್ರೆಸ್ ನ ಮನಃಸ್ಥಿತಿ ಎಂದು ಖಂಡಿಸಿದರು.
ಬ್ರಹ್ಮೋಸ್ ಸಿದ್ಧವಾಗಿದ್ದು ಡಾ.ಮನಮೋಹನ ಸಿಂಗ್ ಅವರು ಪ್ರಧಾನಮಂತ್ರಿಗಳಾಗಿದ್ದ ಅಧಿಕಾರ ಅವಧಿಯಲ್ಲಿ ಎಂಬ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ, ಶಿಕ್ಷಣ ಸಚಿವರು ಯಾವ ಕಾಲೇಜಿನಲ್ಲಿ ಓದಿದ್ರು? ಅವರ ಶಿಕ್ಷಣ ಕಥೆ ಏನು ಅಂಥ ಎಲ್ಲರಿಗೂ ಗೊತ್ತಿದೆ ಬಿಡಿ. ಇದಕ್ಕಾಗಿಯೇ ಹೇಳುವುದು ಅಕ್ಷರಸ್ಥರು ರಾಜಕಾರಣಕ್ಕೆ ಬರಬೇಕು ಅಂಥ. ಅನಕ್ಷರಸ್ಥರು ಸಚಿವರಾದರೆ ಇಂತಹ ಹೇಳಿಕೆಗಳು ಬರುತ್ತವೆ ಎಂದರು.
ಯುದ್ಧದ ಕ್ರೆಡಿಟ್ ಸೈನಿಕರಿಗೆ ಸಲ್ಲಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರ ತೆರಿಗೆ ದುಡ್ಡಲ್ಲಿ ಎರಡು ಸಾವಿರ ರೂಪಾಯಿ ಕೊಟ್ಟು ನಾನೇ ಕೊಟ್ಟೆ, ನಾನೇ ಕೊಟ್ಟೆ ಅಂಥ ಯಾಕೆ ಹೇಳ್ತೀರಾ?
ಇದರ ಕ್ರೆಡಿಟ್ ಅನ್ನು ತೆರಿಗೆದಾರರಿಗೆ ಯಾಕೆ ಕೊಡಲ್ಲ? ಸಿದ್ದರಾಮಯ್ಯನ ಹುಂಡಿಯಲ್ಲಿ ಚಿನ್ನದ ಅಲೂಗೆಡ್ಡೆ, ಚಿನ್ನದ ಕಬ್ಬು ಬೆಳೆದು ಅದರಲ್ಲಿ ಬಂದ ದುಡ್ಡನ್ನು ಜನಕ್ಕೆ ಕೊಡುತ್ತೀದ್ದೀರಾ? ಎಂದು ಪ್ರಶ್ನಿಸಿದರು.
ಯುದ್ಧ ಕ್ರೆಡಿಟ್ ಸೈನಿಕರಿಗೆ ಸಿಗಬೇಕು. ಆದರೆ ಜನ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಹ ಗಟ್ಟಿನಾಯಕತ್ವಕ್ಕೆ ಇದರ ಕ್ರೆಡಿಟ್ ಕೊಡುತ್ತಿದ್ದಾರೆ ಅಷ್ಟೇ. ಹಿಂದೆ ಇಂದಿರಾಗಾಂಧಿ ಅವರಿಗೂ ಕ್ರೆಡಿಟ್ ಕೊಡಲಿಲ್ವಾ? ಎಂದು ಪ್ರತಾಪ ಸಿಂಹ ಪ್ರಶ್ನಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…