ಮೈಸೂರು ನಗರ

ಯುದ್ಧ | ಸಾಕ್ಷಿ ಕೇಳಿದ ಕಾಂಗ್ರೆಸ್‌ ವಿರುದ್ಧ ಪ್ರತಾಪ ಸಿಂಹ ಟೀಕೆ

ಮೈಸೂರು: ಪ್ರತಿ ಬಾರಿಯೂ ಯುದ್ಧ ನಡೆದ ಸಂದರ್ಭದಲ್ಲಿ ಪಾಕಿಸ್ತಾನಕ್ಕಿಂತಲೂ ಮೊದಲು ಸಾಕ್ಷಿ ಕೇಳುವುದು ಕಾಂಗ್ರೆಸ್ ನವರು. ಹಿಂದಿನ ಸಂದರ್ಭದಲ್ಲೂ ಅವರು ಅದೇ ಕೆಲಸ ಮಾಡಿದರು. ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್ ಅಲ್ವಾ? ಹೀಗಾಗಿ ಅವರಿಗೆ ಎಲ್ಲದಕ್ಕೂ ಸಾಕ್ಷಿ ಬೇಕು ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ. ಕೊತ್ತೂರು ಮಂಜುನಾಥ್ ಅವರಿಗೆ ಈ ದೇಶದ ಬಗ್ಗೆ ಏನು ಗೊತ್ತಿದೆ? ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೆ ಮಂಜುನಾಥ್ ಹೇಳ್ತಾರೆ‌. ಕೊತ್ತೂರು ಮಂಜುನಾಥ್ ಹೋಗಿ ಅವರ ನಾಯಕ ಶಶಿ ತರೂರು ಅವರಲ್ಲಿ ಕೇಳಲಿ, ಶಶಿ ತರೂರು ಅವರೇ ಸರಿಯಾಗಿ ಉತ್ತರ ಕೊಡ್ತಾರೆ. ಈ ರೀತಿ ಮಾತನಾಡುವುದು ಕಾಂಗ್ರೆಸ್ ನ ಮನಃಸ್ಥಿತಿ ಎಂದು ಖಂಡಿಸಿದರು.

ಬ್ರಹ್ಮೋಸ್ ಸಿದ್ಧವಾಗಿದ್ದು ಡಾ.ಮನಮೋಹನ ಸಿಂಗ್ ಅವರು ಪ್ರಧಾನಮಂತ್ರಿಗಳಾಗಿದ್ದ ಅಧಿಕಾರ ಅವಧಿಯಲ್ಲಿ ಎಂಬ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ, ಶಿಕ್ಷಣ ಸಚಿವರು ಯಾವ ಕಾಲೇಜಿನಲ್ಲಿ ಓದಿದ್ರು? ಅವರ ಶಿಕ್ಷಣ ಕಥೆ ಏನು ಅಂಥ ಎಲ್ಲರಿಗೂ ಗೊತ್ತಿದೆ ಬಿಡಿ. ಇದಕ್ಕಾಗಿಯೇ ಹೇಳುವುದು ಅಕ್ಷರಸ್ಥರು ರಾಜಕಾರಣಕ್ಕೆ ಬರಬೇಕು ಅಂಥ. ಅನಕ್ಷರಸ್ಥರು ಸಚಿವರಾದರೆ ಇಂತಹ ಹೇಳಿಕೆಗಳು ಬರುತ್ತವೆ ಎಂದರು.

ಯುದ್ಧದ ಕ್ರೆಡಿಟ್ ಸೈನಿಕರಿಗೆ ಸಲ್ಲಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರ ತೆರಿಗೆ ದುಡ್ಡಲ್ಲಿ ಎರಡು ಸಾವಿರ ರೂಪಾಯಿ ಕೊಟ್ಟು ನಾನೇ ಕೊಟ್ಟೆ, ನಾನೇ ಕೊಟ್ಟೆ ಅಂಥ ಯಾಕೆ ಹೇಳ್ತೀರಾ?
ಇದರ ಕ್ರೆಡಿಟ್ ಅನ್ನು ತೆರಿಗೆದಾರರಿಗೆ ಯಾಕೆ ಕೊಡಲ್ಲ? ಸಿದ್ದರಾಮಯ್ಯನ ಹುಂಡಿಯಲ್ಲಿ ಚಿನ್ನದ ಅಲೂಗೆಡ್ಡೆ, ಚಿನ್ನದ ಕಬ್ಬು ಬೆಳೆದು ಅದರಲ್ಲಿ ಬಂದ ದುಡ್ಡನ್ನು ಜನಕ್ಕೆ ಕೊಡುತ್ತೀದ್ದೀರಾ? ಎಂದು ಪ್ರಶ್ನಿಸಿದರು.

ಯುದ್ಧ ಕ್ರೆಡಿಟ್ ಸೈನಿಕರಿಗೆ ಸಿಗಬೇಕು. ಆದರೆ ಜನ ಪ್ರಧಾನಮಂತ್ರಿ ನರೇಂದ್ರ ಮೋದಿ ಅಂತಹ ಗಟ್ಟಿನಾಯಕತ್ವಕ್ಕೆ ಇದರ ಕ್ರೆಡಿಟ್ ಕೊಡುತ್ತಿದ್ದಾರೆ ಅಷ್ಟೇ. ಹಿಂದೆ ಇಂದಿರಾಗಾಂಧಿ ಅವರಿಗೂ ಕ್ರೆಡಿಟ್ ಕೊಡಲಿಲ್ವಾ? ಎಂದು ಪ್ರತಾಪ ಸಿಂಹ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 hours ago