ಮೈಸೂರು ನಗರ

ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್‌ ಕಾಂಗ್ರೆಸ್: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್‌ ಕಾಂಗ್ರೆಸ್ ಆಗಿದ್ದು, ಅವರ ಕೂಸಿನ ಮೇಲೆ ಹಲ್ಲೆ ಮಾಡಿದಾಗ ಅವರಿಗೆ ಹೊಟ್ಟೆ ಉರಿಯುತ್ತದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಆಪರೇಷನ್‌ ಸಿಂಧೂರ ಚುಟುಪುಟು ದಾಳಿ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಚುಟುಪುಟು ದಾಳಿ ಮಾಡಿದ ನಂತರವೇ ಪಾಕಿಸ್ತಾನದ ಡಿಜಿಎಂ ನಮಗೆ ಕರೆ ಮಾಡಿದ್ದು. ಯುದ್ಧ ನಿಲ್ಲಿಸಿ ಎಂದು ಯಾಕೆ ಕೇಳುತ್ತಾ ಇದ್ದರು? ಎಂದು ಪ್ರಶ್ನೆ ಮಾಡಿದರು. ಪಾಕಿಸ್ತಾನದ ಪ್ರಧಾನಿ ಕೂಡ ದಾಳಿ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಕಳೆದ 2008ರ ಮುಂಬೈ ದಾಳಿ‌ ಬಳಿಕ ನೀವು ಏನು ಮಾಡಿದ್ರಿ. ಪ್ರಧಾನಿ ನರೇಂದ್ರ ಮೋದಿ ಮೇಲಿನ ದ್ವೇಷಕ್ಕೆ‌ ಸೇನೆ‌ ಮೇಲೆ ಈ ರೀತಿ ಮಾತನಾಡುವುದು ಸರಿನಾ? ಎಂದು ಕಿಡಿಕಾರಿದರು.

ಇದನ್ನೂ ಓದಿ:- ಬೆಂಗಳೂರು ಮಳೆ ಅವಾಂತರ : ಸಿಎಂ, ಡಿಸಿಎಂ ಸಿಟಿ ರೌಂಡ್ಸ್‌ 

ಇನ್ನು ಮೋದಿಯ ದ್ವೇಷಕ್ಕೆ ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ‌ ಕೊಡುತ್ತಿದ್ದಾರೆ. ಶಶಿ ತರೂರ್‌ ಸೇರಿದಂತೆ ಹಲವರು ದೇಶಕ್ಕೆ ಬೆಂಬಲ ನೀಡುತ್ತಿದ್ದಾರೆ. ಕಾಂಗ್ರೆಸ್‌ನವರು ಪಾಕಿಸ್ತಾನದ ಮೇಲಿನ ಪ್ರೀತಿಯಿಂದ ಈ ಥರ ಹೇಳಿಕೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

34 mins ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

2 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

3 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

4 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

5 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

6 hours ago