ಮೈಸೂರು ನಗರ

ಸಂತೋಷ್‌ ಲಾಡ್‌ಗೆ ದುಡ್ಡಿನ ಕೊಬ್ಬು ಹೆಚ್ಚಾಗಿದೆ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡದಿದ್ದರೆ ಸಂತೋಷ್‌ ಲಾಡ್‌ಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇಬ್ಬರು ಸಚಿವರು ದಿನ ಬೆಳಗಾದರೆ ಕಾಗೆ ಥರ ಕಾಕಾ ಎನ್ನುತ್ತಾರೆ. ಸಂತೋಷ್‌ ಲಾಡ್ ನೀವು ಏನು ಮಾತಾಡ್ತಿದ್ದಿರಿ ಅನ್ನೋ ಜ್ಞಾನ ನಿಮಗೆ ಇದ್ಯಾ? ಮೋದಿ ಬಗ್ಗೆ ಮಾತಾಡದೆ ಇದ್ದರೆ ಲಾಡ್‌ಗೆ ತಿಂದಿದ್ದು ಕರಗುವುದಿಲ್ಲ ಎಂದು ಕಿಡಿಕಾರಿದರು.

ಇನ್ನು ಮರಾಠ ಸಮುದಾಯದ ಸಂತೋಷ್ ಲಾಡ್ ಬಾಯಲ್ಲಿ ಶಿವಾಜಿ ರೀತಿ ಮಾತು ಬರುತ್ತಿಲ್ಲ. ಅಫ್ಜಲ್ ಖಾನ್ ರೀತಿ ಮಾತು ಬರುತ್ತಿದೆ. ಸಂತೋಷ್ ಲಾಡ್ ನೀವೇನು ಬಹಳ ಮೇಧಾವಿ ನಾ.? ಸಂತೋಷ್ ಲಾಡ್ ಒಬ್ಬ ತಿಳಿಗೇಡಿ. ನೇಹಾ ಹತ್ಯೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರೆ ಮೋದಿ ಕೇಳ್ರಿ ಅಂತಾರೆ. ಹೀಗಾಗಿ ನೇಹಾ ಹತ್ಯೆ ಮಾಡಿದವನ ಎನ್ ಕೌಂಟರ್‌ಗೆ ಮೋದಿ ಅನುಮತಿ ಏಕೆ ಬೇಕು ಲಾಡ್? ಒಂದು ವರ್ಷವಾಯ್ತು ನೇಹಾಗೆ ನ್ಯಾಯ ಕೊಡಿಸಿದ್ರಾ? ಕಾರ್ಮಿಕ ಇಲಾಖೆಯ ಹೆಲ್ತ್ ಕಿಟ್ ಹಗರಣದ ಕಥೆ ಏನ್ ಆಯ್ತು? ಮೋದಿಗೆ ಹೇಳಿ ಕೊಡುವಷ್ಟು ನೀವು ಬುದ್ದಿವಂತರಾ? ಎಂದು ಪ್ರಶ್ನೆ ಮಾಡಿದರು.

ಇಂದಿರಾಗಾಂಧಿ ಏನು ಕಡಿದು ಕಟ್ಟೆ ಹಾಕಿದ್ರು: ಇನ್ನು ಮುಂದುವರಿದು ಮಾತನಾಡಿದ ಅವರು ಕಳೆದ 1971ರಲ್ಲಿ ಇಂದಿರಾಗಾಂಧಿ ಏನ್ ಕಡಿದು ಕಟ್ಟೆ ಹಾಕಿದ್ರು. ಅವತ್ತಿನ ಯುದ್ದದ ಗೆಲುವನ್ನು ಹಾಳು ಮಾಡಿದ್ದು ನಿಮ್ಮ ಇಂದಿರಾಗಾಂಧಿ ಅದು ನಿಮಗೆಲ್ಲಾ ನೆನಪಿರಲಿ. ಪಹಲ್ಗಾಮ್‌ನಿಂದ ಕನ್ನಡಿಗರನ್ನು ಕರೆದುಕೊಂಡು ಬರಲು ಅವಕಾಶ ಮಾಡಿ ಕೊಟ್ಟಿದ್ದು ಮೋದಿ. ಅದರಲ್ಲಿ ನಿಮ್ಮ ಸಾಧನೆ ಏನಿದೆ ಲಾಡ್? ನಿಮ್ಮ ಅನಿಷ್ಟಕ್ಕೆಲ್ಲ ಮೋದಿ ಕಾರಣ ಅನ್ನೋ ರೀತಿ ಯಾಕೆ ಮಾತಾಡ್ತಿರಿ? ಪಾಕಿಸ್ತಾನ ಮಾತ್ರ ಶತ್ರು ಅಲ್ಲ. ನಮ್ಮ ಜೊತೆಯಲ್ಲೇ ಇಂತಹ ಹಿತಶತ್ರುಗಳು ಟೈಂ ಬಾಂಬ್ ಥರ ಇದ್ದಾರೆ. ಸಂತೋಷ್ ಲಾಡ್‌ಗೆ ಮೈ ತುಂಬಾ ಮೈನಿಂಗ್ ದುಡ್ಡು ಅಂಟಿ ಕೊಂಡಿದೆ. ಹಣದ ಕೊಬ್ಬಿನಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಮೂಡಾ ಹಗರಣಕ್ಕೆ ಸಿಲುಕಿದ ಕಾರಣ ಸಂತೋಷ್ ಲಾಡ್ ಕಾರ್ಮಿಕ ಕಿಟ್ ಹಗರಣದಿಂದ ಬಚಾವ್ ಆದ್ರು. ಇಲ್ಲದೆ ಇದ್ದಿದ್ದರೆ ಎರಡನೇ ಬಾರಿ ರಾಜೀನಾಮೆ ಕೊಡಬೇಕಿತ್ತು. ನಿಮ್ಮ ಹತ್ತಿರ ದುಡ್ಡು ಇರಬಹುದು ಆದರೆ ಪತ್ರಕರ್ತರಿಗೆ ನೈತಿಕತೆ ಇದೆ. ಇದನ್ನು ನೆನಪಿಟ್ಟು ಕೊಳ್ಳಿ ಲಾಡ್ ಎಂದು ಕಿಡಿಕಾರಿದರು.

ಇನ್ನು ಪಾಕಿಸ್ತಾನವೇ ತನ್ನ ಮೇಲೆ ದಾಳಿ ಆಗಿರುವುದಕ್ಕೆ ಸಾಕ್ಷಿ ಕೊಟ್ಟಿದೆ. ಆದರೂ ಭಾರತದಲ್ಲಿ ಕೆಲವರು ತಕರಾರು ಮಾಡುವುದನ್ನು ನಿಲ್ಲಿಸುತ್ತಿಲ್ಲ. ಕಾಂಗ್ರೆಸ್‌ಗೆ ಪಾಕಿಸ್ತಾನದ ಮೇಲೆ ಸದಾ ಪ್ರೀತಿ. ಕಾಂಗ್ರೆಸ್ ಪಾಕಿಸ್ತಾನದ ಪಿತಾಮಹ.‌ ಅದಕ್ಕೆ ಪ್ರೀತಿ ಜಾಸ್ತಿ ಇರುತ್ತೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

6 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

6 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

6 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

6 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

6 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

6 hours ago