ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಜನರ ಗಮನ ಡೈವರ್ಟ್ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನೂ ಗೊತ್ತಿಲ್ಲ. ಅವರು ಇದರ ಬಗ್ಗೆ ತಿಳಿದುಕೊಳ್ಳಬೇಕು. ಯತೀಂದ್ರ ಸಿದ್ದರಾಮಯ್ಯ ತಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳುತ್ತಿದ್ದಾರೆ. 150 ಕೋಟಿ ವ್ಯಯ ಮಾಡಿ ಕಾಟಾಚಾರಕ್ಕೆ ಮಾಡಿದ್ದ ಗಣತಿಯನ್ನು ಜೆಡಿಎಸ್ ಹಾಗೂ ಬಿಜೆಪಿ ವಿರೋಧ ಮಾಡಿದೆ.
ಹೀಗಾಗಿ ರಾಹುಲ್ ಗಾಂಧಿ ಭೇಟಿ ಮಾಡಿದ ಬಳಿಕ ಮತ್ತೊಂದು ಬಾರಿ ಸಮೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದರಿಂದ 150 ಕೋಟಿ ಹಣ ವ್ಯರ್ಥವಾಗಲಿದೆ ಎಂದು ಕಿಡಿಕಾರಿದರು.





