ಮೈಸೂರು ನಗರ

ಅಭಿವೃದ್ಧಿ ಎಂಬುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಜನರ ಗಮನ ಡೈವರ್ಟ್‌ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನೂ ಗೊತ್ತಿಲ್ಲ. ಅವರು ಇದರ ಬಗ್ಗೆ ತಿಳಿದುಕೊಳ್ಳಬೇಕು. ಯತೀಂದ್ರ ಸಿದ್ದರಾಮಯ್ಯ ತಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳುತ್ತಿದ್ದಾರೆ. 150 ಕೋಟಿ ವ್ಯಯ ಮಾಡಿ ಕಾಟಾಚಾರಕ್ಕೆ ಮಾಡಿದ್ದ ಗಣತಿಯನ್ನು ಜೆಡಿಎಸ್‌ ಹಾಗೂ ಬಿಜೆಪಿ ವಿರೋಧ ಮಾಡಿದೆ.

ಹೀಗಾಗಿ ರಾಹುಲ್‌ ಗಾಂಧಿ ಭೇಟಿ ಮಾಡಿದ ಬಳಿಕ ಮತ್ತೊಂದು ಬಾರಿ ಸಮೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದರಿಂದ 150 ಕೋಟಿ ಹಣ ವ್ಯರ್ಥವಾಗಲಿದೆ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

4 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

4 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

4 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

5 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

6 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

8 hours ago