prathap simha
ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಜನರ ಗಮನ ಡೈವರ್ಟ್ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನೂ ಗೊತ್ತಿಲ್ಲ. ಅವರು ಇದರ ಬಗ್ಗೆ ತಿಳಿದುಕೊಳ್ಳಬೇಕು. ಯತೀಂದ್ರ ಸಿದ್ದರಾಮಯ್ಯ ತಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳುತ್ತಿದ್ದಾರೆ. 150 ಕೋಟಿ ವ್ಯಯ ಮಾಡಿ ಕಾಟಾಚಾರಕ್ಕೆ ಮಾಡಿದ್ದ ಗಣತಿಯನ್ನು ಜೆಡಿಎಸ್ ಹಾಗೂ ಬಿಜೆಪಿ ವಿರೋಧ ಮಾಡಿದೆ.
ಹೀಗಾಗಿ ರಾಹುಲ್ ಗಾಂಧಿ ಭೇಟಿ ಮಾಡಿದ ಬಳಿಕ ಮತ್ತೊಂದು ಬಾರಿ ಸಮೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದರಿಂದ 150 ಕೋಟಿ ಹಣ ವ್ಯರ್ಥವಾಗಲಿದೆ ಎಂದು ಕಿಡಿಕಾರಿದರು.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…