ಮೈಸೂರು: ಪಟಾಕಿ ಸಿಡಿತದಿಂದ ಗಾಯಗೊಳ್ಳುವವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಕುರಿತು ವೈದ್ಯರಾದ ಅಮಿತ್ ಹಾಗೂ ಸುರಭಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದಂದು ಪಟಾಕಿ ಸಿಡಿತಗಳಿಂದ ಕಣ್ಣಿಗೆ ಹಾನಿಯಾಗಿ ಬರುವವರಿಗೆ ತುರ್ತು ಚಿಕಿತ್ಸೆ ಒದಗಿಸಲಾಗುತ್ತದೆ. ಕೆ.ಆರ್.ಆಸ್ಪತ್ರೆಯ ಕಣ್ಣಿನ ವಿಭಾಗದಲ್ಲಿ ದಿನದ 24 ಗಂಟೆಯೂ ಚಿಕಿತ್ಸೆ ಲಭ್ಯವಿರಲಿದೆ. ಕಣ್ಣಿನ ಹಾನಿಗೆ ಒಳಗಾದವರ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಮಕ್ಕಳು ಪಟಾಕಿ ಸಿಡಿಸುವಾಗ ಎಚ್ಚರಿಕೆ ವಹಿಸಬೇಕು. ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದರೆ ಕೂಡಲೇ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಬೇಕು. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದರೆ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಬಹುದು ಎಂದು ಜನತೆಗೆ ಸಲಹೆ ನೀಡಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…